Friday, September 18, 2026
Menu

ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ಸವಾಲು

“ಕುಮಾರಸ್ವಾಮಿ, ಶೋಭಕ್ಕ, ಅಶೋಕ್ ಅವರೇ ನಿಮಗೆ ಬದ್ದತೆ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಹಕಾರ ನೀಡಿ ಎಂದು ಒತ್ತಾಯಿಸುತ್ತಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಮೈಸೂರು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ 419.78 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು. “ವಿಪಕ್ಷಗಳದ್ದು ಬರೀ ಸುಳ್ಳು ಹೇಳುವುದು, ಟೀಕೆ ಮಾಡುವುದು, ತಪ್ಪು ದಾರಿಗೆ ಎಳೆಯುವುದು ಇದೇ

ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ: ಕಾರವಾರದಲ್ಲಿ ಇಬ್ಬರ ಸಾವು

ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟವರು.

ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿ ED ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು , ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಗುಂಡ್ಲು ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್  ಮನೆ ಮೇಲೆ ಇಡಿ ದಾಳಿಯಾಗಿರುವ

ಬೆಳಗಾವಿಯಲ್ಲಿ ಟ್ರಕ್‌ಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಾರು ಕೋಳಿಗಳು ಕೂಡ ಸತ್ತು ಹೋಗಿವೆ. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ

ಚಿಕ್ಕಬಳ್ಳಾಪುರದಲ್ಲಿ ಅಡುಗೆ ಕಲಿ ಎಂದ ಅತ್ತೆ: ವಿಷ ಸೇವಿಸಿ ಸತ್ತ ಸೊಸೆ

ಅತ್ತೆ ಅಡುಗೆ ಕಲಿ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ನೊಂದುಕೊಂಡ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ 18 ವರ್ಷದ ಯುವತಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡವಳು. ಕೆಲವು ತಿಂಗಳ ಹಿಂದೆಯಷ್ಟೇ

ಮದುವೆ ಸಿದ್ಧತೆ, ಬ್ಯಾಂಕ್‌ ಲಾಕರ್‌ನಿಂದ ಒಡವೆ ಮನೆಯಲ್ಲಿ ತಂದಿಟ್ಟ ಶಿರಸಿಯ ವೈದ್ಯನ ಕೊಲೆ

ಮದುವೆ ಸಿದ್ಧತೆಯಲ್ಲಿದ್ದ ಶಿರಸಿಯ ನ್ಯೂ KHB ಕಾಲೋನಿಯ ನಿವಾಸಿಯಾಗಿದ್ದ ವೈದ್ಯರೊಬ್ಬರು ಬ್ಯಾಂಕ್‌ ಲಾಕರ್‌ನಿಂದ ಒಡವೆಗಳನ್ನು ಮನೆಗೆ ತಂದಿಟ್ಟಿದ್ದು, ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾರೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿ, ಇವರ ಪತ್ನಿ ಎಂಟು ತಿಂಗಳ ಹಿಂದೆ ಮೃತಪಟ್ಟಿದ್ದು, 45

ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ

ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು

ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ

ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು

ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು

ಮನೆಗಳಿಗೆ ಕಲುಷಿತ ನೀರು: ಯಡ್ರಾಮಿಯಲ್ಲಿ ಸಾಂಕ್ರಾಮಿಕ ರೋಗ ಭೀತಿ

​ಯಡ್ರಾಮಿ ಪಟ್ಟಣದ 1 ಮತ್ತು 2ನೇ ವಾರ್ಡಿನ ಮನೆಗಳಿಗೆ ಕಲುಷಿತ  ಕಳೆದ ಕೆಲವು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವುದರಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರಿನಲ್ಲಿ ಗಲೀಜು ಹಾಗೂ ದುರ್ವಾಸನೆ ನೀರು ಬರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು  ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರು