Thursday, September 17, 2026
Menu

ಗ್ಯಾರಂಟಿಗಳ ಪಾರದರ್ಶಕ ಅನುಷ್ಠಾನಕ್ಕೆ ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 6 ಸದಸ್ಯರ ಸಮಿತಿ: ರೇವಣ್ಣ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ. ರೇವಣ್ಣ  ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಬಸ್‌ಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಮಂಗಳೂರು ಹಾಗೂ ಉಡುಪಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಮತ್ತಷ್ಟು

ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಶೀಘ್ರ ಪ್ರಕಟ: ಸಿಎಂ 

ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿಕೆ ಶಿವಕುಮಾರ್,  ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ

ಲಾರಿಗೆ ಬೈಕ್‌ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಗದಗದ ರೋಣ ತಾಲೂಕಿನ ಇಟಗಿ ಕ್ರಾಸ್‌ ಬಳಿ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 65 ವರ್ಷದ ಶರಣಪ್ಪ ಜಾಲಿಹಾಳ, 59 ವರ್ಷದ ಸುರೇಶ ತಳವಾರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ರೋಣ ತಾಲೂಕಿನ

ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ದಲಿತರ ಸರಣಿ ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಕಿವಿಗೊಡುತ್ತಿಲ್ಲ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸಗೂರಿನಲ್ಲಿ   ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ

ಬಿಡದಿ ಬಗ್ಗೆ ಬಿಜೆಪಿಗೆ ಗೊಂದಲ, ಬಳ್ಳಾರಿ ಪಾದಯಾತ್ರೆ ಬಗ್ಗೆ ಜೆಡಿಎಸ್‌ಗೆ ಗೊಂದಲ: ಪ್ರಿಯಾಂಕ್‌ ಖರ್ಗೆ

ಕ್ಯಾಬಿನೆಟ್ ನಲ್ಲಿ ಯಾರು ಇರಬೇಕು, ಯಾರು ಇರಬಾರದು ಅನ್ನೋದನ್ನು ಕಾಂಗ್ರೆಸ್‌  ಹೈಕಮಾಂಡ್ ನಿರ್ಧರಿಸುತ್ತದೆ. ಈಶ್ವರಪ್ಪ ಪ್ರಾಮಾಣಿಕರಿದ್ರೆ ಅವರಿಗೆ ಕಳೆದ ಬಾರಿ ಯಾಕೆ ಟಿಕೆಟ್ ನೀಡಲಿಲ್ಲ, ಬಿ. ನಾಗೇಂದ್ರ ಮತ್ತು ಈಶ್ವರಪ್ಪ ಪ್ರಕರಣಕ್ಕೆ ವ್ಯತ್ಯಾಸವಿದೆ. ರಾಜೀನಾಮೆ ಕೊಟ್ಟ ಬಳಿಕವೂ ಬಿಜೆಪಿಯವರು  ಪಾದಯಾತ್ರೆ ಮಾಡ್ತಿದ್ದಾರೆ. 

ಧಾರವಾಡದಲ್ಲಿ ಕಾರು ಉರುಳಿ ಮೂವರ ಸಾವು

ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ

ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ

ದೊಡ್ಡಬಳ್ಳಾಪುರದಲ್ಲಿ ರೈಲು ಡಿಕ್ಕಿ ಹೊಡೆದು ಅಜ್ಜಿ , ಮೊಮ್ಮಕ್ಕಳ ಸಾವು

ದೊಡ್ಡಬಳ್ಳಾಪುರ ನಗರ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಶನಿವಾರ-ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮೊಮ್ಮಕಳಿಬ್ಬರು ಅಜ್ಜಿ ಮನೆಗೆ ಬಂದಿದ್ದರು. ಬೇಗ ಮನೆಗೆ ವಾಪಸ್‌ ಹೋಗಿ ಶಾಲೆಗೆ ತೆರಳಬೇಕೆಂದು ರೈಲು

ಚಿಕನ್‌ ಪೀಸ್‌ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಪಾರ್ಟಿಯಲ್ಲಿ ಚಿಕನ್‌ಪೀಸ್‌ ತಿನ್ನುವ ವಿಚಾರಕ್ಕೆ ಆರಂಭಗೊಂಡ ಕ್ಷುಲ್ಲಕ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಸೀತಾರಾಮ್ ಕೊಲೆಯಾಗಿದ್ದು, ಅರುಣ್‌ಕುಮಾರ್ ಕೊಲೆ ಮಾಡಿದಾತ. ಇವರಿಬ್ಬರೂ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್

ಮೊಬೈಲ್‌ ವಿಚಾರಕ್ಕೆ ಜಗಳ: ಅಣ್ಣನ ಕೊಂದ ತಮ್ಮ

ಮೊಬೈಲ್‌ ವಿಚಾರಕ್ಕೆ ಸೋದರರಿಬ್ಬರು ಜಗಳವಾಡಿ ತಮ್ಮ ಅಣ್ಣನನ್ನು ಕೊಂದಿರುವ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಬಳಿ ನಡೆದಿದೆ. ನಲ್ವತ್ತು ವರ್ಷದ ಅಡಿವಪ್ಪ ಎಂಬವರನ್ನು ತಮ್ಮ ರಾಜು ಎಂಬಾತ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸೋದರರು ಸೇರಿದಂತೆ ಬೆಳಗಾವಿ ಬೈಲಹೊಂಗಲದ ಕುಟುಂಬ