Friday, September 18, 2026
Menu

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ ನಕಲಿ ಸಹಿ ಬಳಸಿ 16 ಕೋಟಿ ರೂ. ಅಕ್ರಮ

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ರೂ.ಗೂ ಅವ್ಯವಹಾರ ನಡೆದಿದ್ದು, ನಾಲ್ಕು ವರ್ಷಗಳಲ್ಲಿ ಅಧಿಕಾರಿಗಳ ನಕಲಿ ಸಹಿ ಬಳಸಿ ಹಣ ಅಕ್ರಮ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಏಳು ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆಂತರಿಕ ಆಡಿಟ್ ಮೂಲಕ ಈ ಹಗರಣ ಪತ್ತೆಯಾಗಿದ್ದು, ಸಿಐಡಿಗೆ ಪ್ರಕರಣ ವರ್ಗಾವಣೆಯಾಗುವ ಸಾಧ್ಯತೆಯಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಕೆಐಎಡಿಬಿ ಬಳ್ಳಾರಿ ವಲಯ ಕಚೇರಿಯಲ್ಲಿ ಈ ಬೃಹತ್‌ ಆರ್ಥಿಕ ಅವ್ಯವಹಾರ ಬೆಳಕಿಗೆ ಬಂದಿದೆ. ಈ ವರ್ಷದ

ಅರಸೀಕೆರೆಯಲ್ಲಿ ಜೂಜು ಅಡ್ಡೆಗೆ ಪೊಲೀಸ್‌ ದಾಳಿ: ತಪ್ಪಿಸಿಕೊಳ್ಳುವಾಗ ಬಿದ್ದು ವ್ಯಕ್ತಿ ಸಾವು

ಹಾಸನದ ಅರಸೀಕೆರೆಯ ಅರೆಕೆರೆ ಗ್ರಾಮದಲ್ಲಿ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರವೀಣ್ (34) ಮೃತಪಟ್ಟ ವ್ಯಕ್ತಿ. ಯುಗಾದಿ ಹಬ್ಬದ ಸಂಭ್ರಮದಲ್ಲಿ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ

ಪಾವಗಡದಲ್ಲಿ ಇಲಾಖೆ ಜಂಟಿ ನಿರ್ದೇಶಕನ ಕಿರುಕುಳ ಆರೋಪ: ಅಧಿಕಾರಿ ಆತ್ಮಹತ್ಯೆ

ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ  ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದು, ಸಂಬಂಧಿಸಿದ ವೀಡಿಯೊ ಸಹೋದ್ಯೋಗಿಗಳಿಗೆ ಕಳಿಸಿದ್ದು ವೈರಲ್‌ ಆಗಿದೆ. ಪೊಲೀಸರು

ಸೈಬರ್‌ ವಂಚನೆ: 15 ಕೋಟಿ ರೂ. ಕಳೆದುಕೊಂಡ ಉದ್ಯಮಿ

ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ೧5 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್‌ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್

ಬೆಸ್ಕಾಂ ಚಿತ್ರದುರ್ಗ ವ್ಯಾಪ್ತಿಯಲ್ಲಿ ನಾಳೆಯಿಂದ ಮಾರ್ಚ್‌ 25ರ ವರೆಗೆ ವಿದ್ಯುತ್‌ ವ್ಯತ್ಯಯ

ಬೆಸ್ಕಾಂ ವ್ಯಾಪ್ತಿಯ ಚಿತ್ರದುರ್ಗ ಮತ್ತು ಕೋಲಾರ ಸೇರಿ ಹಲವೆಡೆ ನಾಳೆಯಿಂದ ಮಾರ್ಚ್ 25ರ ವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳುತ್ತಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ನಿರ್ವಹಣಾ ಕಾಮಗಾರಿಗಳು ಮತ್ತು ಹೆಚ್‌ಟಿ ರೀಕಂಡಕ್ಟರಿಂಗ್ ಕಾರಣ

ತುಮಕೂರಿನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ ಜೇನುನೊಣ ದಾಳಿಗೆ ಬಲಿ

ತುಮಕೂರಿನಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಜೇನುನೊಣಗಳು ದಾಳಿ ಮಾಡಿದ್ದರಿಂದ ಕಾರು ಶೋರೂಂ ಮೇಲ್ವಿಚಾರಕ ವಿಜಯ್ ಪ್ರಕಾಶ್(65) ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ಕೈದು ಜನ ಅಸ್ವಸ್ಥರಾಗಿದ್ದಾರೆ. ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ

ಹೆಣ್ಣುಮಗುವೆಂದು ವಿಷವುಣಿಸಿ ಕೊಂದ ತಂದೆಯ ಬಂಧನ

15 ದಿನದ ಹೆಣ್ಣು ಶಿಶು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿರುವುದನ್ನು ಖಚಿತಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ

ಶೇ‌ 50 ಮಹಿಳಾ ಮೀಸಲು ಮಸೂದೆ ಸಂಸತ್ತಿನಲ್ಲಿ ಅನುಮೋದನೆಯಾಗಲಿ: ಜಿ.ಪರಮೇಶ್ವರ

ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ

ತುಮಕೂರು ಲಾಕಪ್‌ ಡೆತ್‌ ಸಿಐಡಿಗೆ ಎಂದ ಸಚಿವ ಪರಮೇಶ್ವರ್‌

ತುಮಕೂರಿನಲ್ಲಿ ನಡೆದಿರುವ ಲಾಕಪ್ ಡೆತ್ ಕೇಸ್‌ನ ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಗುರುವಾರ ವಿಚಾರಣೆ ಮಾಡುವಾಗಲೇ ವ್ಯಕ್ತಿಯ ಸಾವು ಆಗಿದ್ದು, ಕಾರಣವೇನು ಎಂಬುದು ಗೊತ್ತಾಗಿಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ.

ಸಿಂಧನೂರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಮಠ ಕಟ್ಟಿದ್ದರು. ಮುಳ್ಳೂರು (ಇಜೆ) ಗ್ರಾಮದ