ಜಿಲ್ಲಾ ಸುದ್ದಿ
ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು
ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು. ಬಟ್ಟೆ ತೊಳೆಯುವಾಗ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದು,ಆಕೆಯನ್ನು ರಕ್ಷಿಸಲು ಪತಿ ಗೋಪಾಲ್ ನಾಲೆಗೆ ಇಳಿದಿದ್ದಾರೆ. ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದರಿಂದ ಇಬ್ಬರು ನೀರಿನಲ್ಲಿ ಕೊಚ್ಚಿ
ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ
ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ
ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,
ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಧು (38) ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಮಧುಗಿರಿಯ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇವರು ಕಾಣೆಯಾಗಿದ್ದ ಬಗ್ಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಅಧಿಕಾರ ಹಂಚಿಕೆ: ಹೈಕಮಾಂಡ್ ತೀರ್ಮಾನಕ್ಕೆ ನಾನೂ, ಶಿವಕುಮಾರ್ ಬದ್ಧರಾಗಬೇಕು ಎಂದ ಸಿಎಂ
ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ
ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು
ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27),
ಸಿದ್ದರಾಮಯ್ಯರಿಗೆ ಕಪಟ ಬುದ್ಧಿ ಇಲ್ಲ, ಶಿವಕುಮಾರ್‌ಗೆ ಸಿಎಂ ಸ್ಥಾನ ಖಚಿತ: ಹುಲಿಗೆಮ್ಮದೇವಿ ಆರಾಧಕಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ತಮ್ಮನಂತೆ ನೋಡಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಹತ್ತಿರ ಕಪಟ ಬುದ್ಧಿ ಇಲ್ಲ. ಹೀಗಾಗಿ ಅವರು ಖುಷಿಯಿಂದಲೇ ಶಿವಕುಮಾರ್‌ಗೆ ಸ್ಥಾನ ಬಿಟ್ಟುಕೊಡುತ್ತಾರೆ, ಶಿವಕುಮಾರ್ ಸಿಎಂ ಆಗುವುದು ಖಚಿತ ಎಂದು ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಭವಿಷ್ಯ ಹೇಳಿದ್ದಾರೆ.
ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ
ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು
ಕೆಆರ್ ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಬಾವಿಯಲ್ಲಿ ಪತ್ತೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ ಎಂದು ಗುರುತಿಸಲಾಗಿದೆ. ಕರಣ್ ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ
ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ
ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.




