ಜಿಲ್ಲಾ ಸುದ್ದಿ
ಹೈದ್ರಾಬಾದ್‌ನಲ್ಲಿ ವಂಚಿಸಿ ತಲೆಮರೆಸಿಕೊಂಡಿದ್ದ ದಂಪತಿ ಧಾರವಾಡದಲ್ಲಿ ಅರೆಸ್ಟ್
ಹೈದ್ರಾಬಾದ್‌ನಲ್ಲಿ ವಂಚನೆ ಪ್ರಕರಣದಲ್ಲಿ ಪೊಲೀಸ್ ಠಾಣೆಯೊಂದರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ 23 ಕೋಟಿ ರೂಪಾಯಿ ವಂಚನೆ ಮಾಡಿ ಪೊಲೀಸ್ ಕಸ್ಟಡಿಯಿಂದಲೇ ತಪ್ಪಿಸಿಕೊಂಡು ಬಂದಿದ್ದ ವಂಚಕ ದಂಪತಿಯನ್ನು ಬಂಧಿಸಿದ ಧಾರವಾಡ ಪೊಲೀಸರು ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ. ವಂಚಕರು ಧಾರವಾಡ ಬೈಪಾಸ್ ಮೂಲಕ ರಾಮದುರ್ಗದತ್ತ ಹೊರಟಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ್, ಶಿಲ್ಪಾ ಬಂಧಿತ ವಂಚಕ ದಂಪತಿ. ಹೈದ್ರಾಬಾದ್‌ನಲ್ಲಿ ಹಲವರಿಗೆ ವಂಚನೆ ಮಾಡಿ ಪರಾರಿಯಾಗಿದ್ದರು. ಹೈದ್ರಾಬಾದ್ ಸೆಂಟ್ರಲ್
ಬಂಡೀಪುರದಲ್ಲಿ ಕೇರಳ ಆಭರಣ ತಯಾರಕನನ ಅಡ್ಡಗಟ್ಟಿ ಕಾರು ಸಮೇತ ಚಿನ್ನ ದರೋಡೆ
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶವಾಗಿರುವ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಆಭರಣ ತಯಾರಕ ವಿನು ಅವರ 1.3 ಕೆಜಿಗೂ ಹೆಚ್ಚು ಚಿನ್ನವನ್ನು ದರೋಡೆ ಮಾಡಿ ಕಾರು ಸಹಿತ ಆರೋಪಿಗಳು ಪರಾರಿಯಾಗಿದ್ದಾರೆ. ಕೇರಳದ ಗ್ಯಾಂಗ್ವೊಂದು ಪೂರ್ವನಿಯೋಜಿತ ಕೃತ್ಯ ಎಸಗಿರುವ
ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ
ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ
ಶಿವಮೊಗ್ಗ ಜೈಲು ಕೈದಿಗೆ ಬಾಳೆಗೊನೆಯಲ್ಲಿ ಗಾಂಜಾ, ಸಿಗರೇಟ್ ಸಪ್ಲೈ
ಶಿವಮೊಗ್ಗದ ಸೋಗಾನೆಯಲ್ಲಿರುವ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಮತ್ತು ಸಿಗರೇಟ್ ಅನ್ನು ಕೈದಿಗಳಿಗೆ ಸರಬರಾಜು ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಜೈಲು ಸಿಬ್ಬಂದಿಯೇ ಬೆಚ್ಚಿ ಬಿದ್ದಿದಾರೆ. ಆಟೋ ಚಾಲಕನೊಬ್ಬ ಸೋಗಾನೆ ಜೈಲಿನ ಮುಖ್ಯ ಗೇಟ್ ಬಳಿ ಬಂದು ಜೈಲು ಕ್ಯಾಂಟೀನ್‌ಗೆ ಬೇಕಾದ ಬಾಳೆಗೊನೆ
ಪಾಕ್ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಉತ್ತರಪ್ರದೇಶದ ಇಬ್ಬರ ಬಂಧನ
ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ
ಕಡೂರಿನಲ್ಲಿ ಪೋಷಕರೆದುರೇ ಮಗುವನ್ನು ಹೊತ್ತೊಯ್ದ ಚಿರತೆ: ಗುಡ್ಡದಲ್ಲಿ ಶವ ಪತ್ತೆ
ಕಡೂರು ತಾಲೂಕಿನ ನವಿಲೇಕಲ್ ಪ್ರದೇಶದಲ್ಲಿ ಚಿರತೆಯು ಪೋಷಕರೆದುರೇ ಮಗುವನ್ನು ಹೊತ್ತೊಯ್ದಿದ್ದು, ನವಿಲೇಕಲ್ ಗುಡ್ಡದಲ್ಲಿ ಶವ ಪತ್ತೆಯಾಗಿದೆ. ಚಿರತೆಯು ಐದು ವರ್ಷದ ಮಗು ಸಾನ್ವಿಯನ್ನು ಹೊತ್ತೊಯ್ದಿತ್ತು. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದಾಗ ಚೀರಾಟ ಕೇಳಿ ಪೋಷಕರು ಬಂದಿದ್ದಾರೆ.
ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಣ, ರಿಯಲ್ ಎಸ್ಟೇಟ್‌ಗೆ ಅವಕಾಶವಿಲ್ಲ: ಹೈಕೋರ್ಟ್
ಧರ್ಮ, ದೇವರ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ನೀಡುವುದಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೋಲಾರದ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಘೋಷಣೆ
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು, ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿದ ಸಿಎಂ ಮಾತನಾಡಿ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ
ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಐದು ವರ್ಷಗಳಲ್ಲಿ
ಬೆಳ್ತಂಗಡಿಯಲ್ಲಿ ಸ್ಕೂಟಿಗೆ ಕಾರು ಡಿಕ್ಕಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ 21 ವರ್ಷದ ಅನನ್ಯಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಕಡಬದ ಸುನೀಲ್ ಎಂಬವರ ಪುತ್ರಿ. ಸ್ಕೂಟಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ




