ಜಿಲ್ಲಾ ಸುದ್ದಿ
ನಿಡಗುಂದಿಯಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಜೀವಂತ ಸಮಾಧಿ
ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮಳೆಗೆ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ. ಮೃತರ ಪತಿ ಶಿವಾನಂದ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಗೌರೀಶ್ವರ ದೇವಸ್ಥಾನ ಸಮೀಪವಿರುವ ಮಹಾದೇವಿ ಅವರ ಹಳೆಯ ಮಣ್ಣಿನ ಮನೆ ಮಳೆಗೆ ದುರ್ಬಲಗೊಂಡಿತ್ತು. ಮನೆಯಲ್ಲಿ ದಂಪತಿ ಮಲಗಿದ್ದಾಗ ನಸುಕಿನ ಜಾವ ಮೇಲ್ಚಾವಣಿ ಕುಸಿದು ಮಹಾದೇವಿ ಮಣ್ಣಿನ ರಾಶಿಯಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ. ಪತಿ ಶಿವಾನಂದ ಮನೆಯ ಹೊರಭಾಗದಲ್ಲಿ ಮಲಗಿದ್ದರು. ಕೇಳಿಬಂದರ
ಪೊದೆಯೊಳಗೆ ನವಜಾತ ಹೆಣ್ಣು ಶಿಶು ಪತ್ತೆ: ಜಿಲ್ಲಾಡಳಿತದಿಂದ ರಕ್ಷಣೆ
ಚಿಕ್ಕಮಗಳೂರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ನವಜಾತ ಹೆಣ್ಣು ಮಗುವನ್ನು ಹೆತ್ತ ತಾಯಿ ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ದಿನದ ಹಸುಗೂಸನ್ನು ಟವೆಲ್‌ನಲ್ಲಿ
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಅನುಮೋದನೆ ನೀಡಿ: ರಾಜ್ಯಪಾಲರಿಗೆ ಸಚಿವ ಲಾಡ್ ಮನವಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್ ಚಂದ್
ದುಬಾರೆಯಲ್ಲಿ ಮಹಿಳೆ, ಆನೆ ಸಾವು: ವರದಿ ಕಡೆಗಣಿಸಿ ಬೇಜವಾಬ್ದಾರಿ ತೋರಿದ ಅರಣ್ಯ ಇಲಾಖೆ ಕಾರಣ
ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈನ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದುರಂತಕ್ಕೆ ಅರಣ್ಯ ಇಲಾಖೆಯ
17 ಜನಾನ ಇಟ್ಕೊಂಡು ಹರೀತಿನಿ, ಹರೀತಿನಿ ಅಂದ್ರೆ ಆಗುತ್ತಾ ಕುಮಾರಣ್ಣ: ಡಿಕೆ ಶಿವಕುಮಾರ್
ಮೊನ್ನೆ ತಾನೆ ಕುಮಾರಸ್ವಾಮಿಯವರು ಬೆಂಗಳೂರು ನಗರದಲ್ಲಿ ಬಿ ಖಾತೆಯಿಂದ ಎ ಖಾತೆ ಮಾಡಿಸಬೇಡಿ, ನಮ್ಮ ಸರ್ಕಾರ ಬಂದು ಬಿಡುತ್ತದೆ. ನೀವು ಯಾರೂ ದುಡ್ಡು ಕೊಡಲು ಹೋಗಬೇಡಿ. ನಾವು ಮಾಡುತ್ತೇವೆ ಎಂದು ಮಾತಾಡಿದ್ದಾರೆ. ಅಧಿಕಾರ ಕೊಟ್ಟಾಗ ನಿಮಗೇನೂ ಮಾಡುವುದಕ್ಕೆ ಆಗಲಿಲ್ಲ. ಅಧಿಕಾರ ಇಲ್ಲದೆ
ತಾಯಿ ಬೈದರೆಂದು ಪತ್ರ ಬರೆದಿಟ್ಟು ಮನೆ ತೊರೆದ ಮಂಡ್ಯದ ಬಾಲಕಿಯರು
ತಾಯಿ ಬೈದಿದ್ದಕ್ಕೆ ಸಿಟ್ಟಾಗಿ ಸೋದರಿ ಬಾಲಕಿಯರಿಬ್ಬರು ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸೋದರಿಯರು. ಯಾವುದೋ ವಿಷಯಕ್ಕೆ ತಾಯಿ ಬೈದಿದ್ದಾರೆ. ಇದರಿಂದ ನೊಂದು ಭಾವುಕ
ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ
ದುಬಾರೆಯಲ್ಲಿ ಕಂಜನ್ ದಾಳಿಗೆ ಒಳಗಾಗಿದ್ದ ಮಾರ್ತಾಂಡ ಆನೆ ಸಾವು
ಕೊಡಗಿನ ದುಬಾರೆ ಶಿಬಿರದಲ್ಲಿ ಮಾರ್ತಾಂಡ ಮತ್ತು ಕಂಜನ್ ಆನೆಗಳ ಕದನದ ವೇಳೆ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಆನೆ ಬಿದ್ದು ಆಕೆ ಮೃತಪಟ್ಟಿದ್ದು, ಕದನದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮಂಗಳವಾರ ಅಸು ನೀಗಿದೆ. ಸೋಮವಾರ ಮಧ್ಯಾಹ್ನ ಆನೆಗಳ ಸ್ನಾನದ
ದುಬಾರೆಯಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ
ಕುಶಾಲನಗರದಲ್ಲಿರುವ ದುಬಾರೆ ಶಿಬಿರದಲ್ಲಿ ಸಾಕಾನೆಗಳ ಮಧ್ಯೆ ನಡೆದ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿಯಾಗಿರುವ ದಾರುಣ ಘಟನೆಯೊಂದು ನಡೆದಿದೆ. ಚೆನ್ನೈನ ಜಿನ್ಮು (33) ಮೃತಪಟ್ಟ ಮಹಿಳೆ. ಸೋಮವಾರ (ಇಂದು) ಬೆಳಗ್ಗೆ ಮಹಿಳೆ ಹಾಗೂ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಬಂದಿದ್ದರು. ಸಾಕಾನೆಗಳೊಂದಿಗೆ
ಮನೆ ಮುಂದೆ ನಿಂತಿದ್ದ ಶಿಕ್ಷಕ ಗುಡುಗು ಸಿಡಿಲಿನ ಅಬ್ಬರಕ್ಕೆ ಬೆಚ್ಚಿ ಹೃದಯಾಘಾತಕ್ಕೆ ಬಲಿ
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಅಬ್ಬರಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56) ಮೃತಪಟ್ಟವರು. ಅವರು




