Menu

ಯುಗಾದಿ ಹಬ್ಬಕ್ಕೆ ಹಸು ತೊಳೆಯಲು ಹೋಗಿ ಮೂವರು ಕೆರೆ ಪಾಲು

ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ಬೆಳಗ್ಗೆ ೮.೩೦ ಗಂಟೆಗೆ ಹಸು ತೊಳೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕೆರೆ

ಚಿತ್ರದುರ್ಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಸಾವು

ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ.

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,

ತೀರದ ವರದಕ್ಷಿಣೆ ದಾಹಕ್ಕೆ ಮಗಳು ಬಲಿ: ಚಿಕ್ಕಮಗಳೂರು ಪೋಷಕರ ಆರೋಪ

ನಾಲ್ಕು ವರ್ಷದ ಹಿಂದೆ 110 ಗ್ರಾಂ ಚಿನ್ನ ನೀಡಿ ಅದ್ಧೂರಿಯಾಗಿ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟರೂ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಮಗಳ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಕೊಂದಿರುವುದಾಗಿ ಚಿಕ್ಕಮಗಳೂರಿನ ಪೋಷಕರು ಆರೋಪಿಸಿದ್ದಾರೆ. ಗಂಡನ

ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇಗೆ 50 ಕೋಟಿ ರೂ. ನಿಗದಿ: ಸಚಿವ ಕೆಎನ್‌ ರಾಜಣ್ಣ

ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ

ರಾಯಚೂರಿನಲ್ಲಿ ಕೋಟಿ ಕೋಟಿ ಹಣ ಎಗರಿಸಿ ಬ್ಯಾಂಕ್‌ ಮ್ಯಾನೇಜರ್‌ ಪರಾರಿ

ರಾಯಚೂರು ನಗರದ ಬ್ಯಾಂಕ್ ಆಫ್ ಮಹಾರಾಷ್ಟ್ರ ದ ಮ್ಯಾನೇಜರ್ ಅಕ್ರಮ ಖಾತೆಗಳು, ಗೋಲ್ಡ್ ಲೋನ್ ಮೂಲಕ ಹಲವು ವಂಚನೆಗಳನ್ನು ಮಾಡಿ ಕೋಟಿಗಟ್ಟಲೆ ಹಣ ಎಗರಿಸಿ ಪರಾರಿಯಾಗಿದ್ದಾರೆ. ನರೇಂದ್ರ ರೆಡ್ಡಿ ವಂಚನೆ‌ ಮಾಡಿ ಪರಾರಿಯಾಗಿರುವ ಬ್ಯಾಂಕ್ ಮ್ಯಾನೇಜರ್. 2022-2025 ರ ವರೆಗೆ ಯಾರಿಗೂ

ಫೀಸ್‌ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡದ ಖಾಸಗಿ ಶಾಲೆ

ತುಮಕೂರು ಜಿಲ್ಲೆಯ ಕೊರಟಗೆರೆ ಯಾದಗೆರೆ ಗ್ರಾಮದಲ್ಲಿ ಫೀಸ್‌ ಕಟ್ಟದ ೪೦ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಾಲಾ ಆಡಳಿತ ಮಂಡಳಿ ಹೊರಗಡೆ ನಿಲ್ಲಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ನಡದ ಕನ್ನಡ ಮತ್ತು ಮಂಗಳವಾರ ನಡೆದ ಇಂಗ್ಲಿಷ್  ಪರೀಕ್ಷೆ

ಚನ್ನಪಟ್ಟಣದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕಾರು  ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಅಸು ನೀಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ

ಶಾಸಕ ಯತ್ನಾಳ್‌ ಉಚ್ಚಾಟನೆ ಖಂಡಿಸಿ ರಾಜೀನಾಮೆ ನೀಡಿದ್ದ ಬೆಂಬಲಿಗ ಅಪಘಾತದಲ್ಲಿ ಸಾವು

ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಹುದ್ದೆಗೆ ರಾಜೀನಾಮೆ ನೀಡಿದ್ದ ಬೆಂಬಲಿಗ ಸಂತೋಷ್​ ತಟಗಾರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿ ಬುಧವಾರ ಆದೇಶ

ಸಿಎಂ ಆಗಲೆಂದು ಸತೀಶ್‌ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ

ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18