ಜಿಲ್ಲಾ ಸುದ್ದಿ
ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು
ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ. ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ, ಮತ್ತೊಬ್ಬ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ
ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ
ವಿವಾಹೇತರ ಸಂಬಂಧ: ಮಹಿಳೆಯ ಕೊಲೆಗೈದ ಯುವಕ, ಅನಾಥವಾದ ಮಕ್ಕಳು
ಚಿಕ್ಕಬಳ್ಳಾಪುರದಲ್ಲಿ ಯುವಕನೊಬ್ಬ ವಿವಾಹಿತ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ, ಆಕೆಯ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ತೇಜಸ್ವಿನಿ ಎಂಬಾಕೆ ಗಂಡನಿಂದ ದೂರವಾಗಿ ಇನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದರು. ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡು ಹೋಟೆಲ್‌ನವರೇ ಕೊಟ್ಟಿದ್ದ ಒಂದು ರೂಂನಲ್ಲಿ
ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ
ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆಗ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆ ಅವರ ಆಯ್ಕೆ ರದ್ದುಗೊಂಡಿತ್ತು.
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್‌ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್‌ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ
ವಾಟ್ಸಾಪ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ತುರುವೇಕೆರೆಯಲ್ಲಿ ವಿದ್ಯಾರ್ಥಿ ಸುಸೈಡ್
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಎನ್ನಲಾದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವು ಆತ್ಮಹತ್ಯೆ ಎಂಬುದು ಗೊತ್ತಾಗಿದೆ. ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್ ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಸರ್ಕಾರಿ
ಪೋಕ್ಸೋ ಕೇಸ್, ಮುತ್ಯಾ ಅಜ್ಞಾತ ಸ್ಥಳಕ್ಕೆ: ಬಾಲಕಿ ಪೋಷಕರಿಂದ ಮುತ್ಯಾ ಪರ ಬ್ಯಾಟಿಂಗ್
ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಬಾಲಕಿ ಜೊತೆ ಅನುಚಿತವಾಗಿ ನಡೆದುಕೊಂಡಿರುವ ವೀಡಿಯೋ ವೈರಲ್ ಆದ ಬಳಿಕ ಕೇಸ್ ದಾಖಲಾಗುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದು, ಅಲ್ಲಿಂದ
ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ
‘ಪಿ.ಸಾಯಿನಾಥ್ ಅವರ “Every body loves good drought” ಗ್ರಾಮೀಣ ಪತ್ರಿಕೋದ್ಯದ ಬೈಬಲ್’
ಗ್ರಾಮೀಣ ಪತ್ರಿಕೋದ್ಯಮ ಅಂದ ಕೂಡಲೇ ನನಗೆ ತಕ್ಷಣ ನೆನಪಾಗುವುದು ಪಿ.ಸಾಯಿನಾಥ್ ಅವರು. ಇವರು ಬರೆದಿರುವ “Every body loves good drought” ಎನ್ನುವ ಪುಸ್ತಕ “ಗ್ರಾಮೀಣ ಪತ್ರಿಕೋದ್ಯದ ಬೈಬಲ್” ಎಂದು ಕರೆಯಬಹುದು. ಈ ಪುಸ್ತಕ “ಬರ ಅಂದರೆ ಎಲ್ಲರಿಗೂ ಇಷ್ಟ” ಎಂದು




