Saturday, November 07, 2026
Menu

ಯುವತಿ ವಿಚಾರಕ್ಕೆ ಕಿರುಕುಳ: ಆಡಿಯೊ ರೆಕಾರ್ಡ್‌ ಮಾಡಿಟ್ಟು ಹಾಸನ ಯುವಕ ಸುಸೈಡ್‌

ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿಯಾಗಿ ತಂದೆ, ಮಗ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಂಡ್ಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರಣ್(40) ಮತ್ತು ಮಗ

ಬೀದರ್‌ನಲ್ಲಿ ಮನೆಯೊಳಗೆ ತೊಟ್ಟಿಲಲ್ಲಿದ್ದ ಮಗುವನ್ನು ಕಚ್ಚಿ ಸಾಯಿಸಿದ ಬೀದಿ ನಾಯಿ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದಾಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದರಿಂದ ನಾಲ್ಕು ತಿಂಗಳ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆಯೊಳಗೆ ಮಗು ಮಲಗಿದ್ದ ವೇಳೆ ಪೋಷಕರು ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದಾಗ ಬೀದಿ ನಾಯಿ ನುಗ್ಗಿ ತೊಟ್ಟಿಲಿನಲ್ಲಿ ಮಲಗಿದ್ದ

ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಕನಕಪುರದಲ್ಲಿ ವೈದ್ಯನ ಬಳಿಕ ನರ್ಸ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡು ದಿನಗಳ ಬಳಿಕ ಅವರ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಹಿಳೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45)

ಪಡಿತರ ಅಕ್ಕಿ ಅಕ್ರಮ ಸಾಗಣೆ: ಮೂರು ಲಕ್ಷ ರೂ. ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಅರೆಸ್ಟ್‌

ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರು ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬವರಿಂದ ಮೂರು ಲಕ್ಷ ರೂ. ವಸೂಲಿ ಮಾಡಿದ ಆರೋಪದಡಿ

ಸರ್ಕಾರಿ ಕೆಲಸದ ಆಮಿಷ: ಹಣ ಪಡೆದು ವಂಚನೆ

ಸರ್ಕಾರಿ ಕೆಲಸ‌ದ ಆಮಿಷವೊಡ್ಡಿ ಯುವಕ ಯುವತಿಯರಿಂದ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹೈದರಾಬಾದ್ ಖಾಸಗಿ ಕಂಪನಿಯೊಂದರ ವ್ಯಕ್ತಿ ಪ್ರದೀಪ್​​ ಎಂಬಾತ ಸಾಕಷ್ಟು ಜನರಿಗೆ ವಂಚಿಸಿದ್ದಾನೆ. ರಾಜ್ಯದ ಅತಿ ದೊಡ್ಡ ಮೆಡಿಕಲ್ ಕಾಲೇಜು ಇರುವ ಇಎಸ್​​ಐ

ಬ್ಯಾಂಕಲ್ಲಿ ಚಿನ್ನ ಅಡವಿಟ್ಟು ಹಣ ಜಮೆಯಾದ ಕೂಡಲೇ ಎಗರಿಸಿದ ಸೈಬರ್‌ ವಂಚಕರು

ಚಿನ್ನವನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಖಾತೆಗೆ ಹಣ ಜಮೆ ಮಾಡಿ ಹೊರ ಬರುವಷ್ಟರಲ್ಲಿ ಸೈಬರ್‌ ವಂಚಕರು ಆ ಹಣವನ್ನು ಎಗರಿಸಿರುವ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ವಕೀಲರೊಬ್ಬರು ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ

ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ

ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ

ಹೊಸಕೋಟೆಯಲ್ಲಿ 50 ಬೈಕ್‌ಗಳ ಸಮೇತ ಕಳ್ಳರಿಬ್ಬರ ಬಂಧನ

ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು 50 ಬೈಕ್‌ಗಳ ಸಮೇತ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ನರಸಿಂಹಮೂರ್ತಿ ಮತ್ತು ಪ್ರಸಾದ್ ಬಂಧಿತರು. ಅವರಿಂದ 55 ಲಕ್ಷ ರೂಪಾಯಿ ಮೌಲ್ಯದ ನಾನಾ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ