Menu

ಧಾತ್ರಿ ಮದರ್ ಮಿಲ್ಕ್‌ ಬ್ಯಾಂಕ್‍ಗೆ ಸಚಿವ ಎಂಬಿ ಪಾಟೀಲ್‌ ಚಾಲನೆ 

ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲಾಗಿದ್ದು, ಅವಧಿ ಪೂರ್ವ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಹಾಗೂ ಮಕ್ಕಳ ಆರೋಗ್ಯ ವೃದ್ದಿಗೆ ಈ ಕೇಂದ್ರ ಅತ್ಯಂತ ಸಹಕಾರಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ  ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು. ಜಿಲ್ಲಾಸ್ಪತ್ರೆಯ ಎಂಸಿಎಚ್ ವಿಭಾಗದಲ್ಲಿ  ಆಶ್ರಯ ಹಸ್ತ

ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ

ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಹೊತ್ತೊಯ್ದ ಸ್ಥಳದಲ್ಲಿ  ಕೂಂಬಿಂಗ್ ನಡೆಸುವಾಗ ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬವವರ ಮೇಲೆ  ಚಿರತೆ  ದಾಳಿ ನಡೆಸಿದ್ದು ಕತ್ತು, ತಲೆ, ಕೈ ಗಳನ್ನು ಗಾಯಗೊಳಿಸಿದೆ. ಮೇಕೆಯನ್ನು ಹೊತ್ತೊಯ್ದ  ಸಂದರ್ಭದಲ್ಲಿ ರೈತರು 

ಗುಂಡ್ಲುಪೇಟೆಯಲ್ಲಿ ಆನೆ ದಾಂಧಲೆ; ದಿಕ್ಕಾಪಾಲಾಗಿ ಓಡಿದ ಜನರು

ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದರಿಂದ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಹುಲಿ ಸೆರೆಗಾಗಿ ಕರೆತಂದಿದಂತಹ ಪಾರ್ಥಸಾರಥಿ ಎಂಬ

ತುಮಕೂರು ವಿವಿಯ ‘ಜ್ಞಾನಸಿರಿʼ ಕ್ಯಾಂಪಸ್‌ ಲೋಕಾರ್ಪಣೆಗೊಳಿಸಿದ ರಾಜ್ಯಪಾಲ ಗೆಹ್ಲೋಟ್‌

ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರು  ತುಮಕೂರು ಜಿಲ್ಲೆಯ ಬೀದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು’ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು

ಮುರ್ಡೇಶ್ವರದಲ್ಲಿ ಲಿಫ್ಟ್‌ ಕುಸಿದು ಕಟ್ಟಡ ಕಾರ್ಮಿಕರಿಬ್ಬರ ಸಾವು

ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಲಿಫ್ಟ್‌ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್‌ ಕುಸಿದು ಈ

ಸರಗೂರಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ (58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ವ್ಯಕ್ತಿ ಎಂಟು ತಿಂಗಳ ಹಿಂದೆ ಆನೆ

ಭುಜನೋವೆಂದು ಕ್ಲಿನಿಕ್‌ನಲ್ಲಿ ಇಂಜೆಕ್ಷನ್‌: ಕೊಡಗಿನಲ್ಲಿ ಯುವಕ ಸಾವು

ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋಗಿ ಇಂಜೆಕ್ಷನ್‌ ಪಡೆದುಕೊಂಡ ಯುವಕ ಮೃತಪಟ್ಟಿದ್ದಾನೆ. ವಿನೋದ್ (34) ಮೃತಪಟ್ಟ ಯುವಕ. ವಿನೋದ್ ಭುಜ ನೋವು ಬಾಧಿಸುತ್ತಿದೆಯೆಂದು ಸಂಜೆ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಅಲ್ಲಿ ವೈದ್ಯರು ಅವರಿಗೆ

ಮುಳಬಾಗಿಲು: ಪತ್ನಿ ಕಾಣೆಯಾಗಿದ್ದಕ್ಕೆ ಮಗುವನ್ನು ಕೊಂದು ಪತಿ ಆತ್ಮಹತ್ಯೆ

ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಪತ್ನಿ ಕಾಣೆಯಾಗಿದ್ದಕ್ಕೆ ಮನನೊಂದ ಪತಿ ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಡಿಯನೂರು ಗ್ರಾಮದ ಲೋಕೇಶ್ (37) ಮಗಳು ನಿಹಾರಿಕಾ(5)ಳನ್ನು ಉಸಿರು ಗಟ್ಟಿಸಿ ಕೊಂದು ದೇಹವನ್ನು ಕಾರಿನಲ್ಲಿಟ್ಟು, ಅದೇ ಸ್ಥಳದಲ್ಲಿದ್ದ ತಾನು ಮರಕ್ಕೆ

ಶಿವಮೊಗ್ಗ ಅಂಬೇಡ್ಕರ್‌ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು

ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ನಿಷಾ (21) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿ ನಿಲಯದ ಟೆರೆಸ್ ಮೇಲೆ ವನಿಷಾ ಶವ ನೇಣು

ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ: ಆರ್‌.ಅಶೋಕ 

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ