ಜಿಲ್ಲಾ ಸುದ್ದಿ
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ
ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿದೆ. ತೋಟದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕಾಡಾನೆಯ ಈ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ಸಮೀಪ ತಿರುವಳ್ಳಿಯ ಯಲ್ಲಪ್ಪ (45) ಮೃತಪಟ್ಟವರೆಂದು ಗುರುತಿಸಲಾಗಿದೆ. ನಾಗೇಶ್ ಗೌಡ ಎಂಬವರ ತೋಟದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಯಲ್ಲಪ್ಪ ಕೂಲಿ ಕೆಲಸ ಹಾಗೂ ಗಾರೆ
ಟಿವಿ ನೋಡೋದು ಕಮ್ಮಿ ಮಾಡು ಅಂದಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸುಸೈಡ್
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ಟಿವಿ ನೋಡೋದನ್ನು ಕಮ್ಮಿ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೇಲ್ನಿಂದ ನೇಣು ಬಿಗಿದುಕೊಂಡು ಸುಪ್ರಿತಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗುರುತಿಸಲಾಗಿದೆ. ಬಾಲಕಿ
ಕೊಳ್ಳೇಗಾಲದಲ್ಲಿ ಹುಲಿ ಮೃತದೇಹ ಪತ್ತೆ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಗುಂಡಾಲ್ ಅಣೆಕಟ್ಟು ಸಮೀಪ ಹುಲಿಯ ಮೃತದದೇಹ ಪತ್ತೆಯಾಗಿದೆ. ಮಲೆ ಮಹದೇಶ್ವರ ಸಂರಕ್ಷಿತ ಅರಣ್ಯದಲ್ಲಿ ಇತ್ತೀಚೆಗೆ ಒಟ್ಟು ಐದು ಹುಲಿಗಳು ಮೃತಪಟ್ಟಿದ್ದವು. ಈಗ ಹುಲಿಯ ಸಾವಿನ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ
ಹೂಡಿಕೆಯಲ್ಲಿ ಲಾಭದ ಆಮಿಷ: ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ 38 ವರ್ಷದ ಟೆಕ್ಕಿ. ವಿಐಪಿ ರುದ್ರಾ ಷೇರ್ಸ್ ಎಂದು ವಾಟ್ಸಾಪ್
ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ
ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು.
ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ
ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್‌ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ
ಕಾಂಗ್ರೆಸ್‌ನಿಂದ ಆರನೇ, ಏಳನೇ ಗ್ಯಾರಂಟಿ ಭೂಮಿ,ನೀರು: ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ
ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ
ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ
ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು
ಯತ್ನಾಳ್ ವಿರುದ್ಧ ಚುನಾವಣಾ ಅಕ್ರಮ ಆರೋಪ: ಸುಪ್ರೀಂ ಕೋರ್ಟ್‌ನಲ್ಲೂ ವಜಾ
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅಬ್ದುಲ್




