Menu

ಆನ್ಲೈನ್ ವಂಚನೆ: 1.09 ಕೋಟಿ ರೂ. ಕಳೆದುಕೊಂಡ ಬಾಗಲಕೋಟೆ ವ್ಯಾಪಾರಿ

ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ಬಾಗಲಕೋಟೆಯ ವ್ಯಾಪಾರಿಯೊಬ್ಬರು 1.09 ಕೋಟಿ ರೂ. ಕಳೆದುಕೊಂಡಿರುವುದು ಬಹಿರಂಗಗೊಂಡಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ ಆನ್‌ಲೈನ್ ವಂಚಕರು ವ್ಯಾಪಾರಿಗೆ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇವೆ ಎಂಬ ಆಮಿಷವೊಡ್ಡಿ ಹಣ ದೋಚಿದ್ದಾರೆ. ನಕಲಿ ಇನ್ವೆಸ್ಟ್‌ಮೆಂಟ್ ಮಾರ್ಕೆಟ್ ಮೂಲಕ ಬಾಗಲಕೋಟೆ ಮೂಲದ ವ್ಯಾಪಾರಿಗಯನ್ನು ಆಗಸ್ಟ್ 12 ರಂದು ಸಂಪರ್ಕಿಸಿದ್ದ ವಂಚಕರು, ಮೊದಲು ಗ್ರೂಪ್‌ಗೆ

ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ

ಸಿಎಂ ಬದಲಾವಣೆ: ಹೈಕಮಾಂಡ್‌ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ

ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ

ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು

ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು

ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್‌ ನೋಟ್‌ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು.

ರಾಯಚೂರಿನಲ್ಲಿ ವ್ಯಾಪಾರಿ ಯುವಕನ ಬರ್ಬರ ಹತ್ಯೆ

ರಾಯಚೂರಿನ ಸಿಂಧನೂರು ನಗರದ ಇಂದಿರಾನಗರದಲ್ಲಿ ಪ್ರಾವಿಷನಲ್‌ ಸ್ಟೋರ್ ಹೋಲ್ ಸೇಲ್ ವ್ಯಾಪಾರಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.  ನಾಪತ್ತೆಯಾಗಿದ್ದ ವ್ಯಾಪಾರಿ ಹೆಣವಾಗಿ ಪತ್ತೆಯಾಗಿದ್ದು, ವ್ಯಾಪಾರಿ ಕೈಗಳಿಗೆ ಬೈಡಿಂಗ್ ವೈರ್ ನಿಂದ ಕಟ್ಟಿ ಕಲ್ಲುಗಳಿಂದ ಮುಖ, ಬೆನ್ನಿಗೆ ಜಜ್ಜಿ ಕೊಲೆಗೈಯಲಾಗಿದೆ. ಪ್ರವೀರ್ ಸರ್ದಾರ್(32)

ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷ ಕುರ್ಚಿ ಖಾಲಿ ಇಲ್ಲ: ಸಚಿವ ಜಮೀರ್‌ ಅಹ್ಮದ್‌

2028ರವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಸಹ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಕೊಪ್ಪಳ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ದಸರಾ

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್

ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದ್ದಾರೆ. ಹೊಸಪೇಟೆ

ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ

ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.