ಜಿಲ್ಲಾ ಸುದ್ದಿ
ಮದುವೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಮಹಿಳೆ ಕಣ್ಮರೆ, ರೇಪ್ ಅಂಡ್ ಮರ್ಡರ್ ಶಂಕೆ
ಹಾಸನದಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲೆಂದು ಬಂದಿದ್ದ ಮಹಿಳೆ ಕಣ್ಮರೆಯಾಗಿರುವ ಪ್ರಕರಣ ಬೇಲೂರು ತಾಲೂಕಿನ ಕಲ್ಕೆರೆ ಬಳಿ ನಡೆದಿದೆ. ಸ್ಥಳದಲ್ಲಿ ಆಕೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿರುವುದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ಸೃಷ್ಟಿಸಿದೆ. ಈ ಪ್ರಕರಣದಲ್ಲಿ ಪೊಲೀಸರ ವಿಳಂಬ ಧೋರಣೆ ಮಹಿಳೆಯ ಸಾವಿಗೆ ಕಾರಣವಾಗಿದೆ ಎಂದು ಕುಟುಂಬಸ್ಥರು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ತುಮಕೂರಿನ ಕುಣಿಗಲ್ ಮೂಲದ ಪ್ರಿಯಾಂಕ (29) ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ
ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ: ಸಿಎಂ
ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ
ಫೆ.15ರಂದು ಭಾರತ-ಪಾಕ್ ಕ್ರಿಕೆಟ್ ಪಂದ್ಯ ಯಾರೂ ವೀಕ್ಷಿಸಬೇಡಿ; ಪ್ರಮೋದ್ ಮುತಾಲಿಕ್
ಟಿ-20 ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನವನ್ನು ಫೆ. 15 ರಂದು ಎದುರಿಸುತ್ತಿದೆ. ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ 26 ಜನ ಪ್ರಾಣ ತೆತ್ತಿದ್ದಾರೆ. ಅವರ ಮನೆಯವರ ಕಣ್ಣೀರು ಇನ್ನೂ ಆರಿಲ್ಲ. ಹೀಗಿರುವಾಗ ಅವರ ವಿರುದ್ದ ಪಂದ್ಯ ಆಡುವುದು ಸರಿಯಲ್ಲ. ಇದು ಮೋಸದ
ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರಗ ಜ್ಞಾನೇಂದ್ರ ಆಪ್ತ ಸಹಾಯಕನ ಬಂಧನ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ
ಮನೆ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ: ಬಿಡದಿಯಲ್ಲಿ ವ್ಯಕ್ತಿ ಸಾವು
ರಾಮನಗರ ತಾಲೂಕಿನ ಬಿಡದಿಯಲ್ಲಿ ಮನೆ ಮುಂದೆ ವ್ಯಕ್ತಿಯೊಬ್ಬ ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಆತ ಮೃತಪಟ್ಟಿದ್ದಾನೆ. ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಹಲ್ಲೆಯಿಂದ ಅಸು ನೀಗಿದ ವ್ಯಕ್ತಿ. ಅವರು ಕಳೆದ 11 ವರ್ಷಗಳಿಂದ ಬಿಡದಿಯ
ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ
ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ವಂಚಿಸಿದ ಉಡುಪಿ ದಂಪತಿ
ಉಡುಪಿ ಮೂಲದ ದಂಪತಿ ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚಿನ ವಂಚನೆ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದ ಪ್ರಕರಣವನ್ನು ಮಂಗಳೂರು ಪೊಲೀಸ್ ಆಯುಕ್ತರು ಮರು ತನಿಖೆಗೆ ಆದೇಶಿಸಿದ್ದಾರೆ. ಹರಾಜಿಗೆ ಬಂದ ಫ್ಲ್ಯಾಟ್,
ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ
ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು
ಯಾದಗಿರಿಯಲ್ಲಿ ಕುಡಿಯಬೇಡವೆಂದು ಬುದ್ಧಿ ಹೇಳಿದ್ದಕ್ಕೆ ಮಗಳನ್ನೇ ಕೊಂದ ತಾಯಿ
ಯಾದಗಿರಿ ಜಿಲ್ಲೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿ. ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮಗಳ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಮೃತ ಬಾಲಕಿಯನ್ನು ಪ್ರತಿಭಾ (10) , ಆರೋಪಿ ತಾಯಿ ನಿರ್ಮಲಾ ಎಂದು ಗುರುತಿಸಲಾಗಿದೆ. ಮಗಳು
ಮಳವಳ್ಳಿಯ ಮನೆ ಜಗುಲಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ
ಮಂಡ್ಯದ ಮಳವಳ್ಳಿ ತಾಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆ ಜಗುಲಿಯ ಮೇಲೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ. ಅಕ್ಕಮನಕೊಪ್ಪಲು ಗ್ರಾಮದ ಮಂಜು (44) ಅನುಮಾನಾಸ್ಪದವಾಗಿ ಮೃತಪಟ್ಟವರು, ಇವರು ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದರು. ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು,




