ಜಿಲ್ಲಾ ಸುದ್ದಿ
ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ
ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೊಪ್ಪಳ ಎಸ್ಪಿ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಣಕಲ್ ಗ್ರಾಮದಲ್ಲಿ ಲಕ್ಷ್ಮವ್ವ ಬಜಂತ್ರಿ ಎಂಬವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳಿಗೆ
ಯಾರೇ ದ್ವೇಷ ಭಾಷಣ ಮಾಡಿದರೂ ಎಫ್‌ಐಆರ್ ದಾಖಲು: ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ
ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿ: ಪೌರಾಯುಕ್ತ
2026ರ ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವೆಂಕಟೇಶ ನಾಗನೂರು ಹೇಳಿದ್ದಾರೆ. ಕೊಪ್ಪಳ ನಗರಸಭೆಯ 31 ಸದಸ್ಯರಿಗೆ ಕಳೆದ 10 ತಿಂಗಳಿನಿಂದ ಗೌರವಧನ ಬಂದಿಲ್ಲ. ಖಜಾನೆಯಲ್ಲಿ ಹಣವಿಲ್ಲ ಎಂದು ಮಾಹಿತಿ ನೀಡಿದರು.
ಒಲಂಪಿಕ್ ಪದಕದಲ್ಲೂ ದೇಶ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ
ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್,
ಯೋಜನಾ ವರದಿ ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಲಿ: ಸಚಿವ ಲಾಡ್
ಸುಮಾರು ವರ್ಷಗಳ ನಂತರ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು
ಬೆಳಗಾವಿಯಲ್ಲಿ ಎರಡು ಸಾವಿರ ರೂ. ವಾಪಸ್ ಕೊಡದ್ದಕ್ಕೆ ಸ್ನೇಹಿತನ ಕೊಲೆ
ಬೆಳಗಾವಿ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಗಿರಿಯಾಲ‌್ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದವ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಸಾಲ ಪಡೆದಿದ್ದ
ಕೆಆರ್‌ಎಸ್‌ನಲ್ಲಿ ರಿವರ್ಸ್ ತೆಗೆಯುತ್ತಿದ್ದ ಬಸ್‌ಗೆ ಊಟ ಮಾಡುತ್ತಿದ್ದ ಮಹಿಳೆ ಬಲಿ
ಮಂಡ್ಯದ ಕೆಆರ್‌ಎಸ್ ನಲ್ಲಿ ಬಸ್ ರಿವರ್ಸ್ ತೆಗೆಯುವಾಗ ನಡೆದ ಅವಘಡದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್‌ಎಸ್‌ಗೆ ಪ್ರವಾಸ ಬಂದಿದ್ದ ಕೇರಳದ ಮಹಿಳೆ ಕೌಸಲ್ಯಾ ಪಾರ್ಕಿಂಗ್ ಬಳಿ ಊಟ ಮಾಡುತ್ತ ಕುಳಿತಿದ್ದಾಗ ಈ ದುರಂತ ಸಂಭವಿಸಿದ್ದು, ಮತ್ತೊಬ್ಬರು ಕೇರಳದ ಮಹಿಳೆ ಗಾಯಗೊಂಡಿದ್ದಾರೆ. ಕೆಆರ್‌ಎಸ್
ಮಾಲೂರು ಬಾರ್‌ನಲ್ಲಿ ಮಿಕ್ಸ್‌ಚರ್ ಕೊಡಲಿಲ್ಲವೆಂದು ಕ್ಯಾಷಿಯರ್‌ನ ಕೊಲೆ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಾರ್‌ನಲ್ಲಿ ರಾತ್ರಿ ಮದ್ಯ ಸೇವನೆಗೆ ಹೋದ ವ್ಯಕ್ತಿ ಸೈಡ್ಸ್ ನೀಡುವುದಕ್ಕೆ ಬಾರ್ ಕ್ಯಾಷಿಯರ್ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹೋದ ಕ್ಯಾಷಿಯರ್ ಮನೆಯೊಳಗೆ ಹೋಗಬೇಕು ಎನ್ನುವಷ್ಟರಲ್ಲಿ ಆತನ ಹೆಂಡತಿ-ಮಕ್ಕಳ ಕಣ್ಣೆದುರೇ ಚಾಕು
ಬೆಳಗಾವಿಯಲ್ಲಿ ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಹೆಸರಲ್ಲಿ 12 ಕೋಟಿ ರೂ. ವಂಚನೆ
ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಬೆಳಗಾವಿಯಲ್ಲಿ ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ನೀಡುವುದಾಗಿ ನಂಬಿಸಿ ಸಾವಿರಾರು ಮಹಿಳೆಯರನ್ನು ವಂಚಿಸಿದ್ದು, ಎಂಟು ಸಾವಿರ ಮಹಿಳೆಯರಿಂದ 12 ಕೋಟಿ ರೂ. ದೋಚಿ ಪರಾರಿಯಾಗಿದ್ದಾನೆ. ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿದ ಸೋದರರು ಜಲ ಸಮಾಧಿ
ಮೈಸೂರಿನ ವರುಣಾ ನಾಲೆ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ಮುಳುಗುತ್ತಿರುವುದನ್ನು ನೋಡಿದ ನಾಲೆಯ ಮೇಲ್ಗಡೆ ನಡೆದುಕೊಂಡು ಬರುತ್ತಿದ್ದ ಸಹೋದರರು



