ಜಿಲ್ಲಾ ಸುದ್ದಿ
ಅನೈತಿಕ ಸಂಬಂಧ: ವ್ಯಕ್ತಿಯನ್ನು ಹೊಡೆದು ಕೊಲೆಗೈದ ಮಹಿಳೆಯ ಕುಟುಂಬ
ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಆಕೆಯ ಕುಟುಂಬದವರು ವ್ಯಕ್ತಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಈರಣ್ಣ ಅಗಸಿಬಾಗಿಲು ಮೃತಪಟ್ಟ ವ್ಯಕ್ತಿ. ಆತ ರೇಣುಕಾ ಎಂಬ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈರಣ್ಣ ಹಾಗೂ ರೇಣುಕಾ ಒಟ್ಟಿಗೆ ಇದ್ದ ವೇಳೆ ಆಕೆಯ ಕುಟುಂಬಸ್ಥರು ರೆಡ್‌ಹ್ಯಾಂಡ್ ಆಗಿ ಹಿಡಿದು ಈರಣ್ಣನ ತಲೆಗೆ ಕಬ್ಬಿಣದ
ದಯಾಮರಣ ಕೋರಿದ್ದ ತುಮಕೂರಿನ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ
ಈ ಹಿಂದೆ ಗೃಹಸಚಿವರಾಗಿದ್ದ ಪರಮೇಶ್ವರ್ ಅವರಲ್ಲಿ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ ತುಮಕೂರಿನ ಶಿರಾ ನಗರ ಹೊರ ವಲಯದ ಮಹಿಳೆಯು ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಬಿಯಾ ಪಾಷಾ (39), ಮಗಳು ತಮನ್ನಾ (9), ಮಗ ಸಿಮ್ರಾನ್ (5) ಆತ್ಮಹತ್ಯೆ ಮಾಡಿಕೊಂಡವರು.
ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಗೃಹ ಸಚಿವರ ವಿರುದ್ಧ ಎಂಎಲ್ಸಿ ನಾರಾಯಣಸ್ವಾಮಿ ವಾಗ್ದಾಳಿ
ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕರಡಕಲ್ ಗ್ರಾಮದ ರಾಣೆಮ್ಮ ಅವರ ಕುಟುಂಬಕ್ಕೆ ಭೇಟಿ
ನೇಪಾಳ ಪ್ರವಾಹ: ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಪ್ರಧಾನಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರವಲ್ಲದೆ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ. ನೂರಾರು ಕೊಚ್ಚಿಕೊಂಡು ಹೋಗಿದ್ದಾರೆ, ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತ್ತೆತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಎಷ್ಟು ಜನ
ಕೊಡಗಿನಲ್ಲಿ ಉತ್ತಮ ಮಳೆ: ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ
ಕೊಡಗು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕೃಷ್ಣರಾಜಸಾಗರ ಅಣೆಕಟ್ಟೆಗೆ ಒಳಹರಿವು ಪ್ರಮಾಣ ಗಣನೀಯ ಏರಿಕೆಯಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು, ನಿರಂತರ ಮಳೆಯಿಂದಾಗಿ 17,427 ಕ್ಯೂಸೆಕ್‌ಗೆ ಹೆಚ್ಚಳವಾಗಿದೆ. ಒಳಹರಿವು ಹೆಚ್ಚಾದ್ದರಿಂದ ಜಲಾಶಯದಲ್ಲಿ ನೀರಿನ ಮಟ್ಟವು
ವಿ ಜಿ ಸಿದ್ದಾರ್ಥ ಸ್ಮಾರಕ ಕ್ವಿಜ್; ಉಡುಪಿಯ ತಕ್ಷಕ್ ಶೆಟ್ಟಿ ಪ್ರಥಮ
ಐದನೇ ಆವೃತ್ತಿಯ ವಿ ಜಿ ಸಿದ್ದಾರ್ಥ ಸ್ಮಾರಕ ರಸಪ್ರಶ್ನೆ ಸ್ಪರ್ಧೆ ಅಂತಿಮ ಸುತ್ತಿನಲ್ಲಿ ಉಡುಪಿ ಲಿಟಲ್ ರಾಕ್ ಇಂಡಿಯನ್ ಶಾಲೆಯ ತಕ್ಷಕ್ ಶೆಟ್ಟಿ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿವೇತನಕ್ಕೆ ಭಾಜನರಾದರು. ಮೂವರು ರನ್ನರ್ ಅಪ್‌ಗಳಿಗೆ
ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಶವ ಪತ್ತೆ
ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಜನರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ
ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ವ್ಯಕ್ತಿಯ ಹತ್ಯೆ
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಶಂಕೆಯಿಂದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕೊಲೆಗೈದ ವ್ಯಕ್ತಿಯ ಪೋಟೊವನ್ನು ತನ್ನ ಸ್ಟೇಟಸ್‌ಗೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಕೊಲೆ ಆರೋಪಿ ಪತ್ನಿಯೊಂದಿಗೆ ಸೇರಿ
ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ
ತಮಿಳುನಾಡಿಗೆ ಕಾವೇರಿ ನೀರು: ರೈತರ, ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಕಾವೇರಿ ನದಿಯಿಂದ ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು ೧೫ ದಿನ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ




