ಜಿಲ್ಲಾ ಸುದ್ದಿ
ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ. ಇದಕ್ಕೆ ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ರಾಣೆಬೆನ್ನೂರಿನ ಕಾಕೋಳ ಗ್ರಾಮ ರೂಪಾ ಗಿರೀಶ್ ಕರಬಣ್ಣನವರ ಎಂಬ ಮಹಿಳೆಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರತರಲಾಗಿತ್ತು. ಬಳಿಕ, ಹೆರಿಗೆ
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತುಮಕೂರಿನ ಬಾಲ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,
ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ
ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ
ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು
ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ
ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ. ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ
ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ
ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು
ಕಲಬುರಗಿಯಲ್ಲಿ ನಾಲ್ಕು ದಿನ ತೀವ್ರ ಶೀತ ಗಾಳಿ ಎಚ್ಚರಿಕೆ
ಕಲಬುರಗಿಯಲ್ಲಿ ಇಂದಿನಿಂದ ನಾಲ್ಕು ದಿನ ತೀವ್ರ ಶೀತದ ಗಾಳಿ ಬೀಸಲಿದೆ. ಸಾಮಾನ್ಯಕ್ಕಿಂತ 04- 06 ಡಿಗ್ರಿ ಕಡಿಮೆ ತಾಪಮಾನ ದಾಖಲಾಗುವುದು ಎಂದು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಮಾಹಿತಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ನಿಗಾ ವಹಿಸಿ ಈ ಪರಿಸ್ಥಿತಿಯಲ್ಲಿ ಜನರು ಅನಗತ್ಯವಾಗಿ ಹೊರಗೆ
ಶಿವಮೊಗ್ಗದಲ್ಲಿ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ಹಲ್ಲೆ
ಶಿವಮೊಗ್ಗದ ಮಾರ್ನಮಿ ಬೈಲ್‌ನಲ್ಲಿ ಸ್ಥಳೀಯ ನಿವಾಸಿ ಹರೀಶ್ ಎಂಬವರ ಮೇಲೆ ನೀ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ರಾತ್ರಿ ಮನೆ ಪಕ್ಕದಲ್ಲೇ ವಾಕ್ ಮಾಡುತ್ತಿದ್ದಾಗ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಂದೂ
ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,




