Menu

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದರು. ನವೆಂಬರ್ 24 ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತು ವಿಧಿಸಿ ಒಂದು ಲಕ್ಷ

ಧರ್ಮಸ್ಥಳ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ

ಸಚಿವೆ ಹೆಬ್ಬಾಳ್ಕರ್‌ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್‌ ದುರಂತಕ್ಕೆ ಯುವಕ ಬಲಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ  ಪ್ರಾಣ  ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ

ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್‌ ಲಾಡ್‌

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌  ಭರವಸೆ ನೀಡಿದರು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ

ರಾಜ್ಯದಲ್ಲಿ  ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್‌, ಡ್ರಗ್ಸ್‌: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್‌ ಬಂದಿದೆ. ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ   ವಿಧಾನಸಭೆಯಲ್ಲಿ  ಕಾನೂನು ಸುವ್ಯವಸ್ಥೆ ಕುರಿತು

ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಕೆ ಶಿವಕುಮಾರ್‌

ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಯೇ ಎನ್ ಡಿಎ ಇಡೀ ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರ ಪಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಇಲ್ಲವಾಗಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ 

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಜನಪದ ಗಾಯಕ ಮೈಲಾರಿ ಅರೆಸ್ಟ್‌

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎನ್ನಲಾಗಿರುವ ಮೈಲಾರಿ ಎಂಬಾತನನ್ನು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಮೈಲಾರಿಹಾಗೂ ಆತನ ಐವರು ಸಹಚರರ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಘಟನೆ ಅಕ್ಟೋಬರ್‌ 24 ರಂದು

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್‌

ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ,

ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ

ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ