Saturday, September 19, 2026
Menu

ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು

ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ ಆತನನ್ನು ಅದೇ ಶಾಲೆಯ ಮೂವರು ಬಾಲಕರು ಸೇರಿ ಕೊಲೆ ಮಾಡಿದ್ದಾರೆ. ನಿಂಗರಾಜ್ ಮತ್ತು ಆತನ ಕೆಲ‌ವು ಸ್ನೇಹಿತರಿಗೆ ಎರಡು ದಿನದ ಹಿಂದೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿತ್ತು. ಸಹಪಾಠಿಯೋರ್ವ

ಪ್ರೀತಿ ಹೆಸರಲ್ಲಿ ಸೆಕ್ಸ್‌, ಮದುವೆ ನಿರಾಕರಣೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಸುಸೈಡ್‌ ಯತ್ನ

ಯುವಕನೊಬ್ಬ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ವಿವಾಹವಾಗಲು ನಿರಾಕರಿಸಿದ್ದರಿಂದ ನೊಂದ ಯುವತಿ ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪ ಘಟನೆ ನಡೆದ ಕಾರಣ ಸಮಯಕ್ಕೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ

ಬೆಂಗಳೂರಲ್ಲಿ ಮೊಮ್ಮಗನ ಎದುರೇ ಅಜ್ಜಿಯ ಕೊಲೆಗೈದಿದ್ದಾತ ಆತ್ಮಹತ್ಯೆ

ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ಮೊಮ್ಮಗನ ಎದುರೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾತ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾಕ್ಷಾಯಿಣಮ್ಮ(55) ಎಂಬವರನ್ನು ಶನಿವಾರ ಮಧ್ಯಾಹ್ನ ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ

ಬೀದರ್ ನಲ್ಲಿ ಕತ್ತು ಸೀಳಿದ ಗಾಳಿಪಟ ದಾರ: ಬೈಕ್‌ ಸವಾರ ಸಾವು

ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಗಾಳಿಪಟ ಹಾರಿಸುವ ದಾರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಯನ್ನೇ ಸೀಳಿದ್ದು, ಅತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತಪಟ್ಟವರು. ಅವರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: ಮುಂಡಗೋಡದಲ್ಲಿ ವ್ಯಕ್ತಿಗೆ 1,57,800 ರೂ.ವಂಚನೆ

ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ ತಾಲೂಕಿನ ಮಳಗಿ ನಿವಾಸಿ ಅಕ್ಷಯ ಸುರೇಶ ರೇವಣಕರ (33) ವಂಚನೆಗೊಳಗಾದ

ಶಿವಮೊಗ್ಗ ಜೈಲಿನಲ್ಲಿದ್ದ ಕೈದಿ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಬುಧವಾರ ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಅರಸೀಕೆರೆ ಅಂಗಡಿಯಲ್ಲೇ ಕುಸಿದು ವ್ಯಾಪಾರಿ ಸಾವು

ಹಾಸನದ ಅರಸೀಕೆರೆ ಪಟ್ಟಣದ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್

ತೀರ್ಥಹಳ್ಳಿಯಲ್ಲಿ ಬಸ್‌ ಕಾರು ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76)

ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ  ಶಿಕ್ಷಕ

ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ