ಜಿಲ್ಲಾ ಸುದ್ದಿ
ಹಾಸನದಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ ಗಾಯ
ಹಾಸನದ ಆಲೂರು ತಾಲೂಕಿನ ಹಳೇಆಲೂರು ಗ್ರಾಮದ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಸ್ಫೋಟದಿಂದ ಗಾಯಗೊಂಡ ದಂಪತಿ. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ನಿಗೂಢ ಸ್ಪೋಟದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಟಿಪ್ಪರ್ ಲಾರಿ ಹರಿದು
ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು
ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.
ಶಿರಾದಲ್ಲಿ ರಸ್ತೆ ಅಪಘಾತ: ಮೂವರು ಬಲಿ
ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಭಾನುವಾರ ರಾತ್ರಿ ಎರಡು ಬೈಕ್‌ಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64), ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24) ಮೃತಪಟ್ಟವರು.
ಬೀಳಗಿಯಲ್ಲಿ ಕಾರು ಟಂಟಂ ಡಿಕ್ಕಿ: ಇಬ್ಬರ ಸಾವು
ಬಾಗಲಕೋಟೆ ಜಿಲ್ಲೆಯ ಬೀಳಗಿ ಅನಗವಾಡಿ ಬ್ರಿಡ್ಜ್ ಬಳಿ ಕಾರು ಮತ್ತು ಟಂಟಂ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸರು
ವರ್ಕ್‌ಫ್ರಮ್ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ
ಆನ್‌ಲೈನ್‌ನಲ್ಲಿ ವರ್ಕ್‌ಫ್ರಮ್ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಟೆಲಿಗ್ರಾಂ ಆ್ಯಪ್ ಮೂಲಕ ‘ವರ್ಕ್‌ಫ್ರಮ್ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್ ಕ್ಲಿಕ್ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್ ಕ್ಲಿಕ್
ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ
ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ
ಚಿಕ್ಕಬಳ್ಳಾಪುರದಲ್ಲಿ 274 ಅಂಗನವಾಡಿ ಹುದ್ದೆಗಳ ಭರ್ತಿ: 10ನೇ ತರಗತಿ ಪಾಸ್ ಸಾಕು
ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಸೇವೆಗೆ ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಮೂಲಕ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 860 ಕೋಟಿ ಮಂಜೂರು: ದಿನೇಶ್ ಗುಂಡುರಾವ್
ಬಡವರ ಬಗ್ಗೆ ಚಿಂತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಜಾತಿಗಳ ನಡುವೆ ವಿಷಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತದೆ ಮತ್ತು ಅದು ಕೆಲಸಕ್ಕೆ




