Menu

ಯಡ್ರಾಮಿಯಲ್ಲಿ ಮನೆ ಗೋಡೆ ಕುಸಿದು ಮಲಗಿದ್ದ ಬಾಲಕಿ ಸಾವು

ಯಡ್ರಾಮಿ ಪಟ್ಟಣದಲ್ಲಿ ತಡ ರಾತ್ರಿ ಗೋಡೆ ಕುಸಿದು ಸಾನಿಯಾ (17) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮಹಿಬೂಬ, ನಿಶಾದ, ಆಯಿಷಾ, ರಮಜಾನಬಿ ಗಂಭೀರ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಡ್ರಾಮಿ ಪಟ್ಟಣದ ನಿವಾಸಿ ಸೈಪನಸಾಬ ತಾಂಬೋಳಿ ಹಾಗೂ ಪತ್ನಿ ಸಿಂದಗಿಗೆ ಹೋಗಿದ್ದರು, ಮನೆಯಲ್ಲಿ 5 ಮಕ್ಕಳು ನಿದ್ದೆಯಲ್ಲಿದ್ದಾಗ ಮಧ್ಯರಾತ್ರಿ ಗೋಡೆ ಕುಸಿದ್ದು, ಬಾಲಕಿ ಮೇಲೆ ಗೋಡೆ ಬಿದಿದೆ. ಗೋಡೆ ಕುಸಿತ ಸದ್ದಿಗೆ ಅಕ್ಕ-ಪಕ್ಕದ ನಿವಾಸಿಗಳು ದೌಡಾಯಿಸಿ ಬಂದು ನೋಡುವಷ್ಟರಲ್ಲಿ

ಕೂಡಲಸಂಗಮ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ  ಉಚ್ಛಾಟಿಸಲಾಗಿದ್ದು, ಪಂಚಮಸಾಲಿ ಸಮುದಾಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಖಿಲ ಭಾರತ ಲಿಂಗಾಯ ಪಂಚಮಸಾಲಿ ಸಮಾಜ ಟ್ರಸ್ಟ್ ನ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಮೀಜಿಗಳ ಉಚ್ಛಾಟನೆ ನಿರ್ಧಾರ

ಕೆಮ್ಮಣ್ಣುಗುಂಡಿಯಲ್ಲಿ ಪತ್ನಿ ಜೊತೆ ಸೆಲ್ಫಿ: ಕಾಲು ಜಾರಿ ಕಂದಕಕ್ಕೆ ಬಿದ್ದು ಪತಿ ಸಾವು

ಕೆಮ್ಮಣ್ಣುಗುಂಡಿಯ ಪ್ರವಾಸಿ ತಾಣದ ವೀವ್ ಪಾಯಿಂಟ್​​ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಗಂಡ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಶಿಕ್ಷಕರಾಗಿದ್ದ ಸಂತೋಷ್ (40) ಮೃತಪಟ್ಟವರು. ಸಂತೋಷ್ ಮತ್ತು ಹೆಂಡತಿ ಶ್ವೇತ ಕೆಮ್ಮಣ್ಣುಗುಂಡಿ ನೋಡಲು ಬಂದಿದ್ದರು. ಕೆಮ್ಮಣ್ಣುಗುಂಡಿ

ಅವಕಾಶ ವಂಚಿತರಿಗೆ ಸಮಾನ ಅವಕಾಶ ನೀಡಲು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಅಗತ್ಯ

ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ

ಬಾದಾಮಿಯಲ್ಲಿ ರಸ್ತೆ ಅಪಘಾತ: ಮೂವರ ಸಾವು

ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಕ್ಯಾಂಟರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಹುಲ್ಲಿಕೇರಿ ಗ್ರಾಮದ ಇಬ್ಬರು, ನಂದಿಕೇಶ್ವರದ ಓರ್ವ ಸಾವನ್ನಪ್ಪಿರುವುದು. ಇಬ್ಬರು ಟ್ರ್ಯಾಕ್ಟರ್ ನಲ್ಲಿದ್ದರು. ಇನ್ನೊಬ್ಬ ಕ್ಯಂಟರ್ ನಲ್ಲಿದ್ದ. ವೆಂಕಪ್ಪ ತೋಗುಣಸಿ(೫೫), ಗದ್ದೆಪ್ಪ

ದಾವಣಗೆರೆ ಕೋರ್ಟ್‌ನೊಳಗೆ ಪತ್ನಿಗೆ ಚಾಕು ಇರಿದ ಪತಿ

ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್‌ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ಕೋರ್ಟ್‌ ಹಾಲ್‌ ಒಳಗೆ ಬರುತ್ತಿದ್ದಂತೆಯೇ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣೆಗೆರ ನಿವಾಸಿ ಪದ್ಮಾವತಿ ಚಾಕು ಇರಿತಕ್ಕೆ ಒಳಗಾದವರು, ಪತಿ ಪ್ರವೀಣ್‌ ಚಾಕು

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅಸ್ತು

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು,

ಕೊಪ್ಪಳದಲ್ಲಿ ಅನ್ನಭಾಗ್ಯದ 35 ಟನ್‌ ಅಕ್ಕಿ ಕಳ್ಳ ಸಾಗಣೆ

ಕೊಪ್ಪಳದ ಮುನಿರಾಬಾದ್‌ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತಡೆದು ಲಾರಿಯಲ್ಲಿದ್ದ ೩೫ ಟನ್‌ ಅಕ್ಕಿಯನ್ನು ಸೀಝ್‌ ಮಾಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಭ್ರಷ್ಟರ ಪಾಲಾಗುವುದನ್ನು ತಡೆಯುವ

ಶ್ರೀರಂಗಪಟ್ಟಣದ ಟಿಪ್ಪು ವಕ್ಫ್ ಎಸ್ಟೇಟ್‌ನಲ್ಲಿ ಭ್ರಷ್ಟಾಚಾರ ಆರೋಪ

ಮಂಡ್ಯದ ಶ್ರೀರಂಗಪಟ್ಟಣದ ಷಹೀದ್ ಟಿಪ್ಪು ವಕ್ಫ್ ಎಸ್ಟೇಟ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.  ಮೈಸೂರಿನ‌ ಶಾಸಕ ಹಾಗೂ ಟಿಪ್ಪು ವಕ್ಫ್ ಕಮಿಟಿ ಅಧ್ಯಕ್ಷ ತನ್ವೀರ್ ಸೇಠ್ ಹಾಗೂ ಕಾರ್ಯದರ್ಶಿ ಇರ್ಫಾನ್ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ

ಧರ್ಮಸ್ಥಳ ಪ್ರಕರಣ: ಸ್ವತಂತ್ರ ಮಾಹಿತಿ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ದೂರುದಾರ, ಆರೋಪಿಯಾಗಿದ್ದವರು ಹೊಂದಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಾವು ಹೊಂದಿರುವುದಾಗಿ ಹೇಳಿಕೊಂಡಿರುವ ಅರ್ಜಿದಾರರು ಸೆಪ್ಟೆಂಬರ್ 26 ರಂದು ನ್ಯಾಯಾಲಯಕ್ಕೆ ಸ್ವತಂತ್ರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ಅರ್ಜಿದಾರರಾದ ಪುರಂದರ ಗೌಡ