ಜಿಲ್ಲಾ ಸುದ್ದಿ
ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ
ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಂಜಿತ್ ಕುಮಾರ್ ಭಂಡಾರು ಹೇಳಿದ್ದಾರೆ. ಗುರುವಾರ ರಾತ್ರಿ ನಡೆದ ಗಲಭೆಯಲ್ಲಿ ಗಲಾಟೆ ನಿಯಂತ್ರಿಸಲು ಪೊಲೀಸರು ಕೂಡ ಗಾಳಿಯಲ್ಲಿ ಗುಂಡು ಹಾರಿಸಿದ್ದರು, ಆದರೆ ಕಾಂಗ್ರೆಸ್ ಕಾರ್ಯಕರ್ತ
ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ
ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್ನಿಂದ ದಾಳಿ ಮಾಡಿದ್ದಾರೆ, ಆತ
ನನ್ನ ಫಿನಿಶ್ ಮಾಡಲೆಂದೇ ಗುಂಡಿನ ದಾಳಿ: ಶಾಸಕ ಜನಾರ್ದನ ರೆಡ್ಡಿ
ಶಾಸಕ ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದು, ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ಗುಂಡಿನ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಾಸಕ ಜನಾರ್ಧನ
ಜೈಲಲ್ಲಿದ್ದಾಗ ಡಿಸಿಎಂ ಆತ್ಮಸ್ಥೈರ್ಯ ತುಂಬಿದ್ದರು, ಯಾವುದೇ ಸಹಿ ಹಾಕಿಸಿಕೊಂಡಿಲ್ಲ: ವೀರೇಂದ್ರ ಪಪ್ಪಿ
ನಾನು ಬಿಹಾರ ಚುನಾವಣೆಗೆ ಯಾವುದೇ ಹಣ ನೀಡಿಲ್ಲ. ಜೈಲಲ್ಲಿ ಇದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿದ್ದರು. ನನಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರು ನನ್ನಿಂದ ಯಾವುದೇ ಸಹಿ ಹಾಕಿಸಿಕೊಂಡಿಲ್ಲ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದ್ದಾರೆ. ಅಕ್ರಮ ಹಣ
ತರೀಕೆರೆಯಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಯುವಕನ ಕೊಲೆ
ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ
ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ
ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಸಾಕ್ಷಿ ನಾಶ, ರೇಪಿಸ್ಟ್‌ಗಳ ರಕ್ಷಣೆಗೆ ಯತ್ನ ಆರೋಪ: ಯಲಬುರ್ಗ ವೈದ್ಯಾಧಿಕಾರಿ ವಿರುದ್ಧ ಎಫ್‌ಐಆರ್
ಯಲಬುರ್ಗದ ಮದ್ಲೂರಿನಲ್ಲಿ ನವೆಂಬರ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಗ್ಯಾಂಗ್ ರೇಪ್ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ತಾಲೂಕು ವೈದ್ಯಾಧಿಕಾರಿ ಶಿವಕುಮಾರ್ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಯತ್ನಿಸಿ ಸಾಕ್ಷಿ ನಾಶಪಡಿಸಿರುವ
ಬಸ್‌ನಲ್ಲಿ ಕಾಮುಕನ ಕಿರುಕುಳ: ಸೋಷಿಯಲ್ ಮೀಡಿಯಾದಲ್ಲಿ ಆತನ ವೀಡಿಯೊ ಶೇರ್ ಮಾಡಿದ ಯುವತಿ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯುವತಿ ಸೀಟಲ್ಲಿ ಕುಳಿತಿದ್ದ ಆತನ ವೀಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ
ರಾಯಬಾಗದಲ್ಲಿ ಲಾರಿ ಪಲ್ಟಿ: ವಿದ್ಯಾರ್ಥಿ ಬಲಿ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಉರುಳಿದ ಪರಿಣಾಮವಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವಿನಲ್ಲಿ ಶಾಲೆಗೆ
ಚಿಕ್ಕೋಡಿಯಲ್ಲಿ ನೇಣು ಬಿಗಿದುಕೊಂಡ ಪತ್ನಿ, ವಿಷ ಸೇವಿಸಿದ ಪತಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನ ನೊಂದ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಳ ಗ್ರಾಮದ 24 ವರ್ಷದ ಉಮಾಶ್ರೀ




