Menu

ವಿಧಾನಸಭೆ ಚುನಾವಣೆಯಲ್ಲಿ ಮದ್ದೂರಿನಿಂದ ನಾನು ಇಲ್ಲವೇ ಅಭಿಷೇಕ್‌ ಸ್ಪರ್ಧೆ ಖಚಿತ : ಸುಮಲತಾ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಅಭಿಷೇಕ್‌ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ. ನನ್ನ ಸ್ಪರ್ಧೆ ಖಚಿತ, ಯಾವ ಕ್ಷೇತ್ರ ಎಮಬುದು ಬಿಜೆಪಿ ವರಿಷ್ಠರು ತೀರ್ಮಾನ, ಆದರೆ ಮದ್ದೂರು ಕ್ಷೇತ್ರ ನನ್ನ ಪ್ರಥಮ ಆಯ್ಕೆ. ನಾನು ಅಥವಾ ಮಗ ಅಭಿಷೇಕ್‌ ಚುನಾವಣೆಗೆ ಸ್ಪರ್ಧೆ ಮಾಡಿದರೂ ಅದು ಮದ್ದೂರಿನಿಂದಲೇ ಎಂದು ಸ್ಪಷ್ಟಪಡಿಸಿದ್ದಾರೆ. ದೊಡ್ಡರಸಿನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ಲೋಕಸಭಾ ಚುನಾವಣೆಯಲ್ಲಿ

ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್‌ ಸೆಟ್‌ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಜಗದೀಶ ಶೆಟ್ಟರ್‌

ಬಿಜೆಪಿ ರಾಜ್ಯ ರೈತ ಮೋರ್ಚಾದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ  ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್‌  27, 28 ರಂದು ಹೋರಾಟ ಮಾಡಲು ತೀರ್ಮಾನಿಸಲಾಗಿದೆ  ಎಂದು  ಸಂಸದ ಜಗದೀಶ ಶೆಟ್ಟರ್ ಹೇಳಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ

ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ

ದಾವಣಗೆರೆ ಚಿನ್ನ ದರೋಡೆ: ಪಿಎಸ್‌ಐಗಳಿಬ್ಬರು ಸೇರಿ ನಾಲ್ವರ ಬಂಧನ

ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಜೆ ನಗರ ಠಾಣೆ ಪೊಲೀಸರು ಇಬ್ಬರು ಪಿಎಸ್‌ಐಗಳು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಬಂಧಿತ ಪಿಎಸ್‍ಐಗಳು ಎಂದು ಗುರುತಿಸಲಾಗಿದೆ. ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್,

ಪತಿಯಿಂದ ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿಸಿ ಮದುವೆಯಾದ ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿರುವುದಾಗಿ ರೇಖಾ

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿಕೆ ಶಿವಕುಮಾರ್

ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್

ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.

ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ

ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,