Menu

ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಧು (38) ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಮಧುಗಿರಿಯ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇವರು ಕಾಣೆಯಾಗಿದ್ದ ಬಗ್ಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ರಸ್ತೆಯಲ್ಲಿರುವ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಗೆ ಬಿದ್ದು ಮಧು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರ ಹಂಚಿಕೆ: ಹೈಕಮಾಂಡ್‌ ತೀರ್ಮಾನಕ್ಕೆ ನಾನೂ, ಶಿವಕುಮಾರ್‌ ಬದ್ಧರಾಗಬೇಕು ಎಂದ ಸಿಎಂ

ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು,  ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು  ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ  ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ

ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು

ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್‌ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27),

ಸಿದ್ದರಾಮಯ್ಯರಿಗೆ ಕಪಟ ಬುದ್ಧಿ ಇಲ್ಲ, ಶಿವಕುಮಾರ್‌ಗೆ ಸಿಎಂ ಸ್ಥಾನ ಖಚಿತ: ಹುಲಿಗೆಮ್ಮದೇವಿ ಆರಾಧಕಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ತಮ್ಮನಂತೆ ನೋಡಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಹತ್ತಿರ ಕಪಟ ಬುದ್ಧಿ ಇಲ್ಲ. ಹೀಗಾಗಿ ಅವರು ಖುಷಿಯಿಂದಲೇ ಶಿವಕುಮಾರ್‌ಗೆ ಸ್ಥಾನ ಬಿಟ್ಟುಕೊಡುತ್ತಾರೆ, ಶಿವಕುಮಾರ್‌ ಸಿಎಂ ಆಗುವುದು ಖಚಿತ ಎಂದು ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಭವಿಷ್ಯ ಹೇಳಿದ್ದಾರೆ.

ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ

ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು

ಕೆಆರ್ ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಬಾವಿಯಲ್ಲಿ ಪತ್ತೆ

ಮಂಡ್ಯದ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ ಎಂದು ಗುರುತಿಸಲಾಗಿದೆ. ​ಕರಣ್ ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ

ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ

ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೈದ್ರಾಬಾದ್‌ನಲ್ಲಿ ವಂಚಿಸಿ ತಲೆಮರೆಸಿಕೊಂಡಿದ್ದ ದಂಪತಿ ಧಾರವಾಡದಲ್ಲಿ ಅರೆಸ್ಟ್‌

ಹೈದ್ರಾಬಾದ್‌ನಲ್ಲಿ ವಂಚನೆ ಪ್ರಕರಣದಲ್ಲಿ ಪೊಲೀಸ್ ಠಾಣೆಯೊಂದರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ 23 ಕೋಟಿ ರೂಪಾಯಿ ವಂಚನೆ ಮಾಡಿ ಪೊಲೀಸ್ ಕಸ್ಟಡಿಯಿಂದಲೇ ತಪ್ಪಿಸಿಕೊಂಡು ಬಂದಿದ್ದ ವಂಚಕ ದಂಪತಿಯನ್ನು ಬಂಧಿಸಿದ ಧಾರವಾಡ ಪೊಲೀಸರು ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ. ವಂಚಕರು

ಬಂಡೀಪುರದಲ್ಲಿ ಕೇರಳ ಆಭರಣ ತಯಾರಕನನ ಅಡ್ಡಗಟ್ಟಿ ಕಾರು ಸಮೇತ ಚಿನ್ನ ದರೋಡೆ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶವಾಗಿರುವ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಆಭರಣ ತಯಾರಕ ವಿನು ಅವರ 1.3 ಕೆಜಿಗೂ ಹೆಚ್ಚು ಚಿನ್ನವನ್ನು ದರೋಡೆ ಮಾಡಿ ಕಾರು ಸಹಿತ ಆರೋಪಿಗಳು ಪರಾರಿಯಾಗಿದ್ದಾರೆ. ಕೇರಳದ ಗ್ಯಾಂಗ್​ವೊಂದು ಪೂರ್ವನಿಯೋಜಿತ ಕೃತ್ಯ ಎಸಗಿರುವ

ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ