ಜಿಲ್ಲಾ ಸುದ್ದಿ
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ” ಎಂದು ಡಿಸಿಎಂ ಡಿಕೆಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ
ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳಿಬ್ಬರು ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜೆಡಿ ಲಿಂಗರಾಜು ಮತ್ತು ಸಹಾಯಕ ಎಸ್ ಪ್ರಸಾದ್ ಬಂಧಿತ ಭ್ರಷ್ಟ ಅಧಿಕಾರಿಗಳು. ಸಣ್ಣ ಉದ್ದಿಮೆದಾರ ಚೆನ್ನಬಸವೇಶ್ವರ ಎಂಬವರಿಂದ
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಪ್ರಕರಣದ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಿ: ಪ್ರಜ್ವಲ್ ರೇವಣ್ಣ ಮನವಿ ವಜಾಗೊಳಿಸಿದ ಸುಪ್ರೀಂ
ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು
ಉಡುಪಿ: 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ
ಕಳೆದ ವರ್ಷ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶದ ವಲಸಿಗರಿಗೆ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಕಳೆದ ವರ್ಷ ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ
ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್
“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು, 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ
ದೇವನಹಳ್ಳಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು
ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು. ಚಿಕ್ಕಬಳ್ಳಾಪುರದ ಕಡೆಯಿಂದ
ಗಾಂಧಾರಿ ವಿದ್ಯೆ ಚಮತ್ಕಾರ: ಬಳ್ಳಾರಿಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಪ್ರಾಚೀನ ಕಲೆ “ಗಾಂಧಾರಿ” ವಿದ್ಯೆಯನ್ನು ಕರಗತ ಮಾಡಿಕೊಂಡಿರುವ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ವಿದ್ಯಾರ್ಥಿನಿ ಹಿಮಾಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತರು,
ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ
ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ




