ಜಿಲ್ಲಾ ಸುದ್ದಿ
ತುಮಕೂರಿನಲ್ಲಿ ಬಾಲಕಿ ಎದುರೇ ತಂದೆಯ ಕೊಲೆಗೈದಿದ್ದ ಕಳ್ಳರು ಅರೆಸ್ಟ್
ತುಮಕೂರಿನಲ್ಲಿ ಮಗಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿಯನ್ನು ಅಪರಿಚಿತ ಮುಸುಕುಧಾರಿಗಳು ಕೊಲೆಗೈದು ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನ ಆನೇಕಲ್ ಭಾಗದ ಅತ್ತಿಬೆಲೆಯ ನಿವಾಸಿಗಳು. ರಾಜ್ಯದ ಹಲವೆಡೆ ಕಳ್ಳತನ ಮಡಿರುವ ಈ ಆರೋಪಿಗಳು ಚಿಕ್ಕನಾಯಕನಹಳ್ಳಿಯ ಕೆಂಕೆರೆಗೆ ಬಂದು ಮಂಜುನಾಥ್ ಮನೆಯ ಕಳ್ಳತನಕ್ಕೆ ಹೊಂಚು ಹಾಕಿದ್ದರು. ಜನವರಿ 11
ರಾಸಾಯನಿಕ ಬೆರಸಿ ನಕಲಿ ಹಾಲು ತಯಾರಿ: ಐವರ ಬಂಧನ
ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು ಎಂದು ಗುರುತಿಸಲಾಗಿದೆ. ಈ ಗ್ಯಾಂಗ್ ಕೆಜಿಎಫ್ ತಾಲೂಕಿನ
ಅನ್ಯ ಧರ್ಮದ ಯುವಕನ ಸಂಬಂಧ: ಹೊಸಪೇಟೆಯಲ್ಲಿ ಕೊಲೆಯಾದ ಮೂರು ಮಕ್ಕಳ ತಾಯಿ
ಎಂಟು ವರ್ಷಗಳಿಂದ ಗಂಡನಿಂದ ದೂರವಾಗಿ ಮೂರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಮಹಿಳೆ ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಬೆಳೆಸಿ, ಆತನಿಂದಲೇ ಕೊಲೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಚಾಪಲಗಡ್ಡದಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಉಮಾ (32) ಎಂಬಾಕೆ ರೈಲ್ವೆ ಸ್ಟೇಷನ್ನಲ್ಲಿ
ಬೆಳಗಾವಿಯಲ್ಲಿ ವಾಲ್ಮೀಕಿ ಭವನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ
ಅಕ್ಕಿ ತುಂಬಿದ ಲಾರಿ ಪಲ್ಟಿ: ಇಬ್ಬರು ಸಾವು
ಮಂಡ್ಯ:ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ
ರಬಕವಿಬನಹಟ್ಟಿಯಲ್ಲಿ ಆಸ್ತಿಗಾಗಿ ಅಣ್ಣನ ಮಕ್ಕಳಿಂದ ದಾನಕ್ಕೆ ಹೆಸರಾದ ದಾನಜ್ಜಿಯ ಕೊಲೆ
ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ (ಚಂದ್ರವ್ವ ನೀಲಗಿ) ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾನಜ್ಜಿ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಬಾಗಿಲು ದಾನ ಮಾಡಿದ್ದರು. ಇವರ ಕೊಲೆಗೆ ಸ್ಥಳೀಯರು
ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು
ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ
ಪ್ರೀತಿ ಹೆಸರಲ್ಲಿ ಸೆಕ್ಸ್, ಮದುವೆ ನಿರಾಕರಣೆ: ಡೆತ್ನೋಟ್ ಬರೆದಿಟ್ಟು ಯುವತಿ ಸುಸೈಡ್ ಯತ್ನ
ಯುವಕನೊಬ್ಬ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ವಿವಾಹವಾಗಲು ನಿರಾಕರಿಸಿದ್ದರಿಂದ ನೊಂದ ಯುವತಿ ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪ ಘಟನೆ ನಡೆದ ಕಾರಣ ಸಮಯಕ್ಕೆ
ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ
ಬೆಂಗಳೂರಲ್ಲಿ ಮೊಮ್ಮಗನ ಎದುರೇ ಅಜ್ಜಿಯ ಕೊಲೆಗೈದಿದ್ದಾತ ಆತ್ಮಹತ್ಯೆ
ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ಮೊಮ್ಮಗನ ಎದುರೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾತ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾಕ್ಷಾಯಿಣಮ್ಮ(55) ಎಂಬವರನ್ನು ಶನಿವಾರ ಮಧ್ಯಾಹ್ನ ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ




