Sunday, September 20, 2026
Menu

ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್‌: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್‌ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್‌ ಅಹಿಂದ ಪರ ಧ್ವನಿ ಎತ್ತುವವರು. ಮೌಢ್ಯ, ಮೂಢನಂಬಿಕೆ ವಿರುದ್ಧ ಹೋರಾಟ ಮಾಡುವವರು. ದುರ್ಬಲ ವರ್ಗದವರ ಬಗ್ಗೆ ಕಾಳಜಿ ಇರುವವರು. ಸಿದ್ದರಾಮಯ್ಯ ಅವರಿಗೆ ಯಾರಾದರೂ ಉತ್ತರಾಧಿಕಾರಿ ಬೇಕಲ್ಲವೇ. ಅದು ಸತೀಶ್‌ ಆದರೆ

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ

ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್‌ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ

ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ

ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್‌

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ

ಕೋಲಾರದಲ್ಲಿ ಏಳು ದಿನದ ಹೆಣ್ಣು ಮಗುವನ್ನು ಬಿಟ್ಟು ಅಸ್ಸಾಂ ದಂಪತಿ ಸುಸೈಡ್‌

ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿ ಗ್ರಾಮದಲ್ಲಿ ಅಸ್ಸಾಂ ಮೂಲದ ದಂಪತಿ ಏಳು ದಿನಗಳ ಹೆಣ್ಣು ಶಿಶುವನ್ನು ಬಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೆಹಮಾನ್ (28) ಮತ್ತು ಪತ್ನಿ ಫರಿಜಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ದಂಪತಿ ಅಸ್ಸಾಂನವರಾಗಿದ್ದು,

ಹಣಕ್ಕಾಗಿ ಮೈಸೂರು ಉದ್ಯಮಿಯ ಕಿಡ್ನ್ಯಾಪ್‌ ಮಾಡಿದ್ದ ಗ್ಯಾಂಗ್‌ ಅರೆಸ್ಟ್‌

ಮೈಸೂರಿನ ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ಉದ್ಯಮಿಯನ್ನು ಅಪಹರಿಸಿದ್ದ ಗ್ಯಾಂಗ್‌ ಅನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿಕೊಂಡು ಹೋಗಿದ್ದರು. ಲೋಕೇಶ್ ಮೊಬೈಲ್‌ನಿಂದ ಅವರ

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪ್ರತಿಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡನೆ ಸಿದ್ಧತೆ, ಸರ್ಕಾರದಿಂದ 33 ಮಸೂದೆ ಮಂಡನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ಮಧ್ಯೆ ಕಾವೇರಿದ ಚರ್ಚೆ, ಜಟಾಪಟಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.  ಸರ್ಕಾರದಿಂದ 30ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗಲಿದ್ದು, ಒಂದಷ್ಟು ಮಸೂದೆಗಳು ಅಧಿವೇಶನದಲ್ಲಿ