ಜಿಲ್ಲಾ ಸುದ್ದಿ
ವರ್ಕ್ಫ್ರಮ್ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ
ಆನ್ಲೈನ್ನಲ್ಲಿ ವರ್ಕ್ಫ್ರಮ್ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಟೆಲಿಗ್ರಾಂ ಆ್ಯಪ್ ಮೂಲಕ ‘ವರ್ಕ್ಫ್ರಮ್ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್ ಕ್ಲಿಕ್ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್ ಕ್ಲಿಕ್ ಮಾಡಿ, ವಂಚಕರ ಸೂಚನೆಗಳನ್ನು ಪಾಲಿಸಿದ್ದಾರೆ. ಮೊದಲಿಗೆ ವಂಚಕರು ಸಣ್ಣ ಟಾಸ್ಕ್ಗಳನ್ನು ನೀಡಿ ವಿಶ್ವಾಸ ಗಳಿಸಲು 1000 ಮತ್ತು 1300 ರೂ. ಪಾವತಿಸಿದ್ದಾರೆ. ನಂತರ ಹಣ ಇನ್ವೆಸ್ಟ್ ಮಾಡಿದರೆ
ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ
ಬೀದರ್ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ
ಚಿಕ್ಕಬಳ್ಳಾಪುರದಲ್ಲಿ 274 ಅಂಗನವಾಡಿ ಹುದ್ದೆಗಳ ಭರ್ತಿ: 10ನೇ ತರಗತಿ ಪಾಸ್ ಸಾಕು
ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಸೇವೆಗೆ ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಮೂಲಕ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 860 ಕೋಟಿ ಮಂಜೂರು: ದಿನೇಶ್ ಗುಂಡುರಾವ್
ಬಡವರ ಬಗ್ಗೆ ಚಿಂತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಜಾತಿಗಳ ನಡುವೆ ವಿಷಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತದೆ ಮತ್ತು ಅದು ಕೆಲಸಕ್ಕೆ
ಚುನಾವಣಾ ರಾಜಕೀಯಕ್ಕೆ ಗೀತಾ ಶಿವರಾಜ್ ಕುಮಾರ್ ನಿವೃತ್ತಿ ಘೋಷಣೆ
ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೂತನವಾಗಿ ಆಯ್ಕೆಯಾದ ಶ್ವೇತಾ ಬಂಡಿಯ ಹುದ್ದೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ
ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫುದ್ದೀನ್ ಬರ್ಬರ ಹತ್ಯೆ
ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಹತ್ಯೆ ಸಂಭವಿಸಿದೆ. ಎಕೆಎಂಎಸ್ ಬಸ್ ಮಾಲಕ ಸೈಪು ಅಲಿಯಾಸ್ ಸೈಫುದ್ದೀನ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಕೊಲೆಗೈದಿದೆ. ವರದಿಗಳ ಪ್ರಕಾರ, ಕೊಡವೂರು ಸಮೀಪದ ಸಾಲ್ಮರ ಪ್ರದೇಶದಲ್ಲಿರುವ ಸೈಫ್ ಅವರ ಮನೆಗೆ ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ
ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ
ರೈತ ದಸರಾಗೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಚಾಲನೆ
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ ರೈತ ದಸರಾ ೨೦೨೫ ಕಾರ್ಯಕ್ರಮಕ್ಕೆ ನಂದಿ ಪೂಜೆಯೊಂದಿಗೆ ನಗಾರಿ ಬಾರಿಸುವ ಮೂಲಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ಹಳ್ಳಿಕಾರ್ ಎತ್ತಿಗೆ ಪೂಜೆ ಸಲ್ಲಿಸಿದರು. ರೈತ ದಸರಾ