ಜಿಲ್ಲಾ ಸುದ್ದಿ
ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಏಳನೇ ದಿನಕ್ಕೆ
ಪ್ರತಿ ಟನ್ ಗೆ 3500 ರೂ. ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಗುರ್ಲಾಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಕಿವಿಗೊಟ್ಟ ರಾಜ್ಯ ಸರ್ಕಾರ ಪ್ರತಿಭಟನಾ ಸ್ಥಳಕ್ಕೆ ಹಿರಿಯ ಸಚಿವ ಎಚ್.ಕೆ.ಪಾಟೀಲರನ್ನು ಕಳುಹಿಸಲು ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ಇಂದು ಬೆಳಗಾವಿಗೆ ಎಚ್.ಕೆ.ಪಾಟೀಲ್ ಭೇಟಿ ನೀಡಲಿದ್ದಾರೆ.
ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಪಣಂಬೂರು ಪೊಲೀಸ್
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ಕುಟುಂಬ ಕಲಹ ಕಾರಣ ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಗೆ ಯತ್ನಿಸಿದ್ದ ರಾಜೇಶ್ ಎಂಬವರನ್ನು ಪಣಂಬೂರು ಪೊಲೀಸರು ರಕ್ಷಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಒಳನುಗ್ಗಿದ ಪೊಲೀಸರು ಮಗು ಹಾಗೂ ರಾಜೇಶ್‌ರನ್ನು ರಕ್ಷಿಸುಲ್ಲಿ
ಗಾಣಗಾಪುರ ದೇಗುಲಕ್ಕೆ ತೆರಳುತ್ತಿದ್ದ ಮೂವರು ಅಪಘಾತಕ್ಕೆ ಬಲಿ
ಬೀದರ್‌ನ ಭಾಲ್ಕಿ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಡಿಕ್ಕಿಯಾಗಿ ಕಾರಿನ ಚಾಲಕ ಮತ್ತು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ
ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್.ವೈ.ಮೇಟಿ (79) ನಿಧನರಾದರು. ಹೆಚ್.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್
ಹೃದಯಾಘಾತಕ್ಕೆ ಪತಿ ಬಲಿ: ಸುದ್ದಿ ತಿಳಿದ ಪತ್ನಿಯೂ ಕುಸಿದು ಸಾವು
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಗಂಡನ ಸಾವಿನ ಸುದ್ದಿ ತಿಳಿದು ಪತ್ನಿಯೂ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಶಶಿಧರ (40) ಮತ್ತು ಸರೋಜಾ (35) ಸಾವಿನಲ್ಲೂ ಒಂದಾದ ದಂಪತಿ. ಚಿನ್ನದ ಅಂಗಡಿ ನಡೆಸುತ್ತಿದ್ದ ಶಶಿಧರ ಹದಿನೈದು ವರ್ಷಗಳ ಹಿಂದೆ ಸರೋಜಾರನ್ನು
ದಾವಣಗೆರೆಯಲ್ಲಿ ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ ಆರೋಪಿ ಅರೆಸ್ಟ್
ದಾವಣಗೆರೆಯಲ್ಲಿ ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್ ರಾಜಕೀಯ ನಾಯಕನ ಸೋಗಿನಲ್ಲಿ ಕೆಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಡಿ
ಆನ್ಲೈನ್ ವಂಚನೆ: 1.09 ಕೋಟಿ ರೂ. ಕಳೆದುಕೊಂಡ ಬಾಗಲಕೋಟೆ ವ್ಯಾಪಾರಿ
ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ಬಾಗಲಕೋಟೆಯ ವ್ಯಾಪಾರಿಯೊಬ್ಬರು 1.09 ಕೋಟಿ ರೂ. ಕಳೆದುಕೊಂಡಿರುವುದು ಬಹಿರಂಗಗೊಂಡಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ ಆನ್‌ಲೈನ್ ವಂಚಕರು ವ್ಯಾಪಾರಿಗೆ ಹೂಡಿಕೆ ಮಾಡಿದರೆ ಹೆಚ್ಚಿನ
ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ
ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ
ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ
ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ




