Menu

ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು

ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ ಬೀಳ್ಕೊಡುಗೆ ಸಮಾರಂಭದಲ್ಲಿ ವಿಶ್ವನಾಥ್ ವೇದಿಕೆಯ ಮೇಲೆ ನಿಂತು ಹಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಸಹೋದ್ಯೋಗಿಗಳು, ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿದ್ದರು. ಹಾಡುವಾಗಲೇ ವಿಶ್ವನಾಥ್ ವೇದಿಕೆಯ ಮೇಲೆಯೇ ಕುಸಿದು ಬಿದ್ದರು, ತಕ್ಷಣ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು

ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್‌ ನೋಟ್‌ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು.

ರಾಯಚೂರಿನಲ್ಲಿ ವ್ಯಾಪಾರಿ ಯುವಕನ ಬರ್ಬರ ಹತ್ಯೆ

ರಾಯಚೂರಿನ ಸಿಂಧನೂರು ನಗರದ ಇಂದಿರಾನಗರದಲ್ಲಿ ಪ್ರಾವಿಷನಲ್‌ ಸ್ಟೋರ್ ಹೋಲ್ ಸೇಲ್ ವ್ಯಾಪಾರಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.  ನಾಪತ್ತೆಯಾಗಿದ್ದ ವ್ಯಾಪಾರಿ ಹೆಣವಾಗಿ ಪತ್ತೆಯಾಗಿದ್ದು, ವ್ಯಾಪಾರಿ ಕೈಗಳಿಗೆ ಬೈಡಿಂಗ್ ವೈರ್ ನಿಂದ ಕಟ್ಟಿ ಕಲ್ಲುಗಳಿಂದ ಮುಖ, ಬೆನ್ನಿಗೆ ಜಜ್ಜಿ ಕೊಲೆಗೈಯಲಾಗಿದೆ. ಪ್ರವೀರ್ ಸರ್ದಾರ್(32)

ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷ ಕುರ್ಚಿ ಖಾಲಿ ಇಲ್ಲ: ಸಚಿವ ಜಮೀರ್‌ ಅಹ್ಮದ್‌

2028ರವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಸಹ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಕೊಪ್ಪಳ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ದಸರಾ

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್

ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದ್ದಾರೆ. ಹೊಸಪೇಟೆ

ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ

ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು

ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ.  ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ

ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಪಿರಿಯಾಪಟ್ಟಣ : ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಹೆತ್ತ ತಾಯಿಯೇ ಹಸು ಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 9 ದಿನದ ಮಗು ಮತ್ತು ಎರಡು ವರ್ಷದ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೇ ಅರ್ಬಿಯಾ ಬಾನು.