Menu

ನನಗೆ ಜಾತಿಗೆಟ್ಟ ಬುದ್ದಿ ಇಲ್ಲ, ಪಕ್ಷ ನಿಷ್ಠೆ ಇರುವ ವ್ಯಕ್ತಿ: ಜಿಟಿ ದೇವೇಗೌಡ

ಮೈಸೂರು: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್ ಗೆ  ಹೋಗುತ್ತಾರೆ  ಅಂತಾರೆ. ಆದರೆ ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ. ದೇವೇಗೌಡರ ಮಾತಿಗೆ ಬೆಲೆ ಕೊಟ್ಟು ಇಲ್ಲಿದ್ದೇನೆ ಎಂದರು. ನಾನು ಸಿದ್ದರಾಮಯ್ಯ ಇಬ್ಬರು 25 ವರ್ಷದಿಂದ

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ರೈತರಿಬ್ಬರು ಬಲಿ

ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಮೃತಪಟ್ಟ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಕೊಟ್ಟಿಗೆಗೆ ಸೊಪ್ಪು ತರಲೆಂದು ಇಬ್ಬರೂ ಕಾಡಿಗೆ ಹೋಗಿದ್ದಾಗ ಆನೆ ದಾಳಿ ನಡೆಸಿ ಈ ದುರಂತ ಸಂಭವಿಸಿದೆ.

ವರದಕ್ಷಿಣೆ ಕಿರುಕುಳ ಆರೋಪ: ಚಿಕ್ಕಮಗಳೂರಿನಲ್ಲಿ ವಿಷ ಸೇವಿಸಿದ್ದ ಮಹಿಳೆ ಸಾವು

ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಾ ಎಂದು (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ

ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣವೆಂಬ ಹೇಳಿಕೆಗೆ ಬದ್ಧ: ಡಿಸಿಎಂ 

“ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ

ತರೀಕೆರೆಯಲ್ಲಿ ನಾಳೆ ಮದುವೆ: ವಧು ಇಂದು ಹೃದಯಾಘಾತಕ್ಕೆ ಬಲಿ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ ವಧು ಶೃತಿ (32) ಅವರ ಮದುವೆ ನಾಳೆ ತರೀಕೆರೆಯಲ್ಲಿ ನಡೆಯಲು ಎಲ್ಲ ಸಿದ್ಧತೆ ಆಗಿತ್ತು, ಆದರೆ ಇಂದು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಳೆ ತರೀಕೆರೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶೃತಿ ಮತ್ತು

ನವೆಂಬರ್‌ನಲ್ಲಿ ನಡೆಯಲಿದೆ ಬಿಜೆಪಿಯೊಳಗೆ ಕ್ರಾಂತಿ: ಭೈರತಿ ಸುರೇಶ್‌

ನವೆಂಬರ್ ತಿಂಗಳಿನಲ್ಲಿ ಕ್ರಾಂತಿ ಆಗುವುದು ಕಾಂಗ್ರೆಸ್‌ನಲ್ಲಿ ಅಲ್ಲ, ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ. ಹೀಗಾಗಿ ಅವರು ಆ ವಿಚಾರವನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಚರ್ಚಿಸಲು ವಿಷಯವಿಲ್ಲ.

ಕಾಂಗ್ರೆಸ್ ಸರ್ಕಾರ ನೌಕರರಿಗೆ ಸಂಬಳ ನೀಡುತ್ತಿಲ್ಲ : ಬಿವೈ ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದ ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಸಂಕಷ್ಟ ಎದರಿಸುತ್ತಿದೆ. ತೆಲಂಗಾಣ ಸಿಎಂ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದಿದ್ದಾರೆ, ನಮ್ಮ ರಾಜ್ಯದ ಪರಿಸ್ಥಿತಿ ಏನೂ ಭಿನ್ನವಾಗಿ ಉಳಿದಿಲ್ಲ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗ್ತಿಲ್ಲ ರಾಜ್ಯದಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಆತ್ಮಹತ್ಯೆ

ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬಸವರಾಜ ಬೊಮ್ಮಾಯಿ

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ