ರಾಯಚೂರು
ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ಮೂವರು ಯುವಕರ ದುರ್ಮರಣ
ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ. ಮೈಲಾರ ಜಾತ್ರೆಗೆ ಒಂದೇ ಬೈಕ್ ನಲ್ಲಿ ಹೊರಟ್ಟಿದ್ದ ಮೂವರು ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು. ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ. ದರ್ಶನ್ ಹಾಗೂ ಆಕಾಶ್ ಮೂರನೇ
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಮಹಾಸಂಪನ್ನ: 25 ಲಕ್ಷಕ್ಕೂ ಹೆಚ್ಚು ಭಕ್ತರಿಗೆ ದಾಸೋಹ
ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ ಕೊಪ್ಪಳದ ಗವಿಮಠದ ಜಾತ್ರೆಗೆ ವಿದ್ಯುಕ್ತವಾಗಿ ಮಹಾ ಸಂಪನ್ನಗೊಂಡಿದೆ. 25 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ದಾಸೋಹದಲ್ಲಿ ಊಟ ಮಾಡಿದ್ದಾರೆ. ಜನವರಿ 15 ರಂದು ಗವಿಸಿದ್ದೇಶ್ವರರ ರಥೋತ್ಸವ ವೈಭವದಿಂದ ನಡೆದಿತ್ತು. ಅಂದು ಐದು ಲಕ್ಷ ಜನ ಭಾಗವಹಿಸಿದ್ದರು.
ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಹೆಸರಿನಲ್ಲಿ ವಂಚನೆ ಜಾಲ
ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸುವ ಜಾಲವೊಂದು ಕಾರ್ಯಾಚರಿಸುತ್ತಿರುವುದು ಬಯಲಾಗಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ
ಟ್ರ್ಯಾಕ್ಟರ್ -ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು
ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18)
ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತಪಟ್ಟವರು. ಘಟನೆಯಲ್ಲಿ 10
ಹಿಂದೂ ಅವಮಾನಕರ ಶಬ್ಧ: ಭಗವಾನ್ ವಿವಾದಾತ್ಮಕ ಹೇಳಿಕೆ
ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಅರ್ಥ ಎಂದು ಚಿಂತಕ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ
ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ
ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ