ರಾಯಚೂರು
ರಾಯಚೂರಿನಲ್ಲಿ ಮಲಗಿದ್ದಾಗ ಹಾವು ಕಚ್ಚಿ ತಾಯಿ, ಮಗ ಸಾವು
ರಾಯಚೂರು ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ ರಾತ್ರಿ ಮಲಗಿದ್ದ ತಾಯಿ ಮತ್ತು ಮಗನಿಗೆ ಹಾವು ಕಚ್ಚಿ ಇಬ್ಬರೂ ಮೃತಪಟ್ಟಿದ್ದಾರೆ. ಸುಬ್ಬಮ್ಮ (35) ಮತ್ತು ಪುತ್ರ ಬಸವರಾಜ್ (10 ವರ್ಷ) ಮೃತಪಟ್ಟವರು. ರಾತ್ರಿ ಮನೆಯಲ್ಲಿ ಮಲಗಿದ್ದಾಗ ಹಾವು ಕಚ್ಚಿದೆ. ಮನೆಯವರು ತಾಯಿ ಮತ್ತು ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ ವಾಹನ ತಯಾರಿ ಮಾಡಿಕೊಂಡು ಆಸ್ಪತ್ರೆಗೆ ಹೋಗುವಷ್ಟರಲ್ಲಿ ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದಾರೆ. ಹಾವು ಕಚ್ಚಿದಾಗ ಮಲಗಿದ್ದರಿಂದ ತಕ್ಷಣ ಗೊತ್ತಾಗಿಲ್ಲ. ವಿಷ
ರಾಯಚೂರು ಕ್ಷೇತ್ರದಲ್ಲಿ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ
ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ
ಬಿಗ್ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ 14 ಲಕ್ಷ ರೂ. ವಂಚನೆ ಆರೋಪ
ಬಿಗ್ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮೈನುದ್ದೀನ್ ಆರೋಪ ಮಾಡಿದ್ದು, ಕೇಬಲ್ ಚಾನೆಲ್ ಸೆಟ್ಅಪ್ ಮಾಡುವ ಒಪ್ಪಂದದಡಿ ಸುರೇಶ್ 14 ಲಕ್ಷ ರೂಪಾಯಿ ಪಡೆದು
ಅನುದಾನ ದುರುಪಯೋಗ: ರಾಯಚೂರಿನಲ್ಲಿ ಇಬ್ಬರು ಪಿಡಿಒಗಳ ಅಮಾನತು
ರಾಯಚೂರಿನ ಗ್ರಾಮ ಪಂಚಾಯತ್ಗಳಲ್ಲಿ ಕಾಮಗಾರಿ, ಸಾಮಗ್ರಿ ಖರೀದಿ ಬಿಲ್ಗಳಲ್ಲಿ ಅವ್ಯವಹಾರ ನಡೆಸಿರುವ, ಸರ್ಕಾರಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಾಗೂ ಕರ್ತವ್ಯ ಲೋಪ ಆರೋಪದಡಿ ಇಬ್ಬರು ಪಿಡಿಒಗಳನ್ನು ಅಮಾನತುಗೊಳಿಸಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ ಪಿಡಿಒ ಶಿವರಾಜ ಹಾಗೂ ಲಿಂಗಸುಗೂರು ತಾಲೂಕಿನ
ಮಾನ್ವಿಯಲ್ಲಿ ಕೂಲಿ ನೀಡದ ಗ್ರಾಮ ಪಂಚಾಯತಿ ಕಚೇರಿಗೆ ಬೇಲಿ ಹಾಕಿದ ನರೇಗಾ ಕಾರ್ಮಿಕರು
ನರೇಗಾ ಕಾರ್ಮಿಕರಿಗೆ ಕೂಲಿ ಪಾವತಿಸದ ರಾಯಚೂರು ಮಾನ್ವಿಯ ಸುಂಕೇಶ್ವರ ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರು ಬೇಲಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಪಂಚಾಯತಿ ಕಚೇರಿ ಎದುರು ನೊಂದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ ತಿಂಗಳಲ್ಲಿ ನರೇಗಾ ಯೋಜನೆ ಅಡಿ ನಾಲೆಯ ಹೂಳೆತ್ತುವ ಕಾಮಗಾರಿ
ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವಕ್ಕೆ ಮಳೆಯಲ್ಲೂ ಜನ ಸಾಗರ
ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ನೆರವೇರಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 24ರವರೆಗೆ
ಹೇರ್ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ
ಯಾದಗಿರಿಯಲ್ಲಿ ಹೇರ್ ಪಿನ್ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ
ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್ ಮಾಕ್ ಡ್ರಿಲ್
ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್
ಮಂತ್ರಾಲಯ ಪ್ರವಾಸದಲ್ಲಿ ದೇವನಹಳ್ಳಿಯ ವಿದ್ಯಾರ್ಥಿಗಳಿಬ್ಬರು ತುಂಗಭದ್ರಾ ಪಾಲು
ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಯಚೂರಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ದೇವನಹಳ್ಳಿ ತಾಲೂಕಿನ ಚಿನವಂಡನಹಳ್ಳಿಯ ಮುತ್ತುರಾಜು(23) ಹಾಗೂ ಮದನ್(20) ಮೃತ ವಿದ್ಯಾರ್ಥಿಗಳು. ದೇವನಹಳ್ಳಿಯ
ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು: ನಿಯಂತ್ರಣ ತಪ್ಪಿದ ಗೂಡ್ಸ್ ಪಿಕಪ್ ವಾಹನ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಗುರುವಾರ ಸಂಭವಿಸಿದೆ. ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್ (28), ಸೋಮು (38),