ರಾಮನಗರ
ಅನೈತಿಕ ಸಂಬಂಧ ಬೇಡವೆಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಮಹಿಳೆ
ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಅನೈತಿಕ ಸಂಬಂಧ ಮುಂದುವರಿಸುವುದು ಡವೆಂದ ಯುವಕನ ಮೇಲೆ ಮಹಿಳೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ತಿಕ್ ಎಂಬ ಯುವಕ ದೀಪಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ಧಿವಾದದ ಬಳಿಕ ಆಕೆಯ ಸಹವಾಸ ತೊರೆದಿದ್ದ. ಇದರಿಂದ ಆಕ್ರೋಶಗೊಂಡ ದೀಪಾ ಕಾರ್ತಿಕ್ ಅಂಗಡಿಯೊಂದರಲ್ಲಿದ್ದಾಗ ಕಾರಿನಲ್ಲಿ ಗ್ಯಾಂಗ್ ಜೊತೆ ಬಂದು ಮಾರಣಾಂತಿಕ ಹಲ್ಲೆ ಮಾಡಿಸಿದ್ದಾಳೆ. ಆಗ ದೀಪಾ ಕಾರಿನಲ್ಲೇ ಕುಳಿತಿದ್ದರೆ ಇತರ ಆರೋಪಿಗಳು ಅಂಗಡಿಯ ಬಳಿ
ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ರೈತ ಪುಟ್ಟಮಾದೇಗೌಡ (48) ಆನೆ ದಾಳಿಗೆ ಬಲಿಯಾದವರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಾದೇಗೌಡ ಸ್ಥಳದಲ್ಲೇ ಅಸು ನೀಗಿದ್ದಾರೆ. ಬನ್ನೇರುಘಟ್ಟ ಅರಣ್ಯ
ಅಕ್ರಮ ಸಂಬಂಧ: ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆಗೆ ಯತ್ನ
ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಹಲ್ಲೆಗೊಳಗಾದ ಕಾರ್ತಿಕ್ (26) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಹಲ್ಲೆ ವೇಳೆ ತಡೆಯಲು ಹೋದ ಯುವಕನ
ರಾಮನಗರದಲ್ಲಿ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಡಿಸಿಎಂ ಡಿಕೆ ಶಿವಕುಮಾರ್ ಅವರ ತವರು ಕ್ಷೇತ್ರದ ರಾಮನಗರದಲ್ಲಿ ತಡರಾತ್ರಿ ಲೋಕಾಯುಕ್ತ ದಾಳಿ ನಡೆದಿದ್ದು, ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ತಂಗರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ನೌಕರರ ಸಂಘದ ಕಚೇರಿ ಮೇಲೆ ಸಾರ್ವಜನಿಕರ
ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು
ಕನಕಪುರ ತಾಲೂಕಿನ ಸಾತನೂರು ಅರಣ್ಯ ವಲಯದ ವ್ಯಾಪ್ತಿಯ ಕುನ್ನೂರು ಗ್ರಾಮದ ಬಳಿ ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ. ಕಾಡಾನೆಗಳು ಹಿನ್ನೀರು ದಾಟಲು ಮುಂದಾದಾಗ ನೀರಿನೊಳಗಿದ್ದ ಜೊಂಡಿನಲ್ಲಿ ಸಿಲುಕಿ ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ಬರಲಾಗದೆ ಒದ್ದಾಡಿ ಮೃತಪಟ್ಟಿವೆ ಎನ್ನಲಾಗಿದೆ.
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ
ಹಿಟ್ ಅಂಡ್ ರನ್: ದೊಡ್ಡಬಳ್ಳಾಪುರದಲ್ಲಿ ಯುವಕರಿಬ್ಬರು ಬಲಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಹಿಟ್ ಅಂಡ್ ರನ್‌ಗೆ ಬೈಕ್ ಸವಾರರಿಬ್ಬರು ಬಲಿಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರು.
ಚನ್ನಪಟ್ಟಣದಲ್ಲಿ ನೀರಿನ ಟಬ್‌ಗೆ ಬಿದ್ದು ಮಗು ಸಾವು
ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್ ಒಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಯ ಪುತ್ರಿ ಖುಷಿ ಮೃತ ಪಟ್ಟ ದುರ್ದೈವಿ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಅಸು
ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್
ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ
ನೆಲಮಂಗಲದಲ್ಲಿ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು.




