ರಾಮನಗರ
ರಾಮನಗರ ಜಿಲ್ಲೆಯ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ.ಶಿವಕುಮಾರ್
“ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು,” ಎಂದು ಡಿಸಿಎಂ ಡಿ.ಕೆ. ಶಿವ ಕುಮಾರ್ ಹೇಳಿದ್ದಾರೆ. ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. “100 ಎಕರೆ ಪ್ರದೇಶವನ್ನು ಗುರುತಿಸಿ ಬಡವರಿಗೆ ನಿವೇಶನ ಹಂಚುವ
ಯುವ ಕಾಂಗ್ರೆಸ್ ಮೂಲಕ ಬೆಳೆದವರು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದಾರೆ: ಡಿ.ಕೆ.ಸುರೇಶ್
“ರಾಜ್ಯದ ಮಂತ್ರಿ ಮಂಡಲದಲ್ಲಿರುವ ಶೇ 50 ಕ್ಕೂ ಹೆಚ್ಚು ನಾಯಕರು ಯುವ ಕಾಂಗ್ರೆಸ್ ನಿಂದ ಬಂದವರು. ರಾಮಲಿಂಗಾರೆಡ್ಡಿ ಅವರು, ಯು.ಟಿ.ಖಾದರ್ , ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೀಗೆ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದ ಆಸ್ತಿಗಳಾಗಿ ಬೆಳೆದಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್
ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್
ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ
ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ
ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್ ಕಲಾಂದರ್ ಖಾನ್ ಮತ್ತು ವೀರೇಶ್
ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್
ಸಾಲದ ಶೂಲ: ದೊಡ್ಡಬಳ್ಳಾಪುರದಲ್ಲಿ ತಿಂಗಳ ಹಿಂದೆ ತಾಯಿ, ಇಂದು ಮಗ ಆತ್ಮಹತ್ಯೆ
ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ನಂದಿ ಮೋರಿ ಬಳಿ ಸೋಮವಾರ ಬೆಳಗ್ಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ತಾಲೂಕಿನ ಕೊನಘಟ್ಟ
ಚನ್ನಪಟ್ಟಣದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಅಸು ನೀಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ
ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ಉರುಳಿ ಗಾಯಗೊಂಡಿದ್ದ ಯುವತಿ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ28ರ ಯುವಕ ಲೋಹಿತ್ ಶನಿವಾರವೇ ಮೃತಪಟ್ಟಿದ್ದು, ಜ್ಯೋತಿ ಇಂದು ಅಸು ನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿ ರುವ ಮತ್ತೊಬ್ಬ ಯುವಕ
ಹೆಚ್ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ
ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ
ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು