ಶಿವಮೊಗ್ಗ
ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ, ಮನೆ ಮಾಲೀಕನಿಗೆ ಗಾಯ
ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ. ಮನೆಗೆ ಬಂದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಸ್ಟವ್‌ಗೆ ಜೋಡಿಸುವಾಗ ಅನಿಲ ಸೋರಿಕೆಯಾಗಿ ಬೆಂಕಿ ಹರಡಿಕೊಂಡಿದೆ. ಬೆಂಕಿಯಿಂದ ಗಾಯಗೊಂಡ ಮನೆ ಮಾಲೀಕ ಮಲ್ಲಿಕಾರ್ಜುನ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್, ಶರಾವತಿ ಸಂತ್ರಸ್ತರಿಗೆ ಪರಿಹಾರ: ತೀರ್ಮಾನ ಅಂತಿಮ ಘಟ್ಟದಲ್ಲಿ ಎಂದ ಸಚಿವ ಖಂಡ್ರೆ
ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು
ಮಂಗನಕಾಯಿಲೆಗೆ ತೀರ್ಥಹಳ್ಳಿ ಯುವಕ ಬಲಿ
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಮಂಗನಕಾಯಿಲೆ (ಕೆಎಫ್ ಡಿ)ಯಿಂದ ಮೃತಪಟ್ಟಿದ್ದಾರೆ. ಸೋಂಕಿನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಕಳೆದ ಭಾನುವಾರದಿಂದ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಅಸು ನೀಗಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ
ಶಿವಮೊಗ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಬಚಾವ್
ಶಿವಮೊಗ್ಗದ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡ ರಾತ್ರಿ ಆಕಸ್ಮಿಕವಾಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ ಸಂಸ್ಥೆಗೆ ಸೇರಿದ ಬಸ್
ವರದಕ್ಷಿಣೆ ಕಿರುಕುಳ ಆರೋಪಿಗಳಿಗೆ ಐದು ವರ್ಷ ಜೈಲು, ದಂಡ
ವರದಕ್ಷಿಣೆ ಕಿರುಕುಳ ಆರೋಪದಡಿ ಬಂಧಿತರಾಗಿದ್ದ ತಾಯಿ ಮತ್ತು ಮಗನಿಗೆ ಶಿವಮೊಗ್ಗ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಕುಮಾರ್ ಆರೋಪಿಗಳ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ
ಕೇಂದ್ರ ಕಾರಾಗೃಹದಲ್ಲಿ ಕೈ ಕೈ ಮಿಲಾಯಿಸಿದ ಕೈದಿಗಳು
ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪುಗಳ ಮಧ್ಯೆ ಜಗಳವಾಗಿದ್ದು, ಕೆಲವು ಕೈದಿಗಳ ಮೇಲೆ ಹಲ್ಲೆ ನಡೆದಿದೆ. ಶರಾವತಿ ವಿಭಾಗದ ಸೊಹೈಲ್ ಅಹ್ಮದ್ ಮತ್ತು ಮೊಹ್ಮದ್ ಜುನೈದ್ ಎಂಬುವವರು ಟವರ್ ವಿಭಾಗದ ಬಳಿ ಬಂದಾಗ ಅನ್ವರ್ ಎಂಬಾತನೊಂದಿಗೆ ಮಾತಿನ
ಶಿಕಾರಿಪುರದಲ್ಲಿ ಕರಡಿ ದಾಳಿ: ತೀವ್ರ ಗಾಯಗೊಂಡ ಕೃಷಿಕ
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಸಮೀಪದ ಗಂಗವ್ವನ ಸರ ಮೀಸಲು ಅರಣ್ಯ ಪ್ರದೇಶದಲ್ಲಿ ಹಾರೋಗೊಪ್ಪ ಗ್ರಾಮದ ಕೃಷಿಕ ಸೋಮ್ಲನಾಯ್ಕ(60) ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ ಸೋಮ್ಲನಾಯ್ಕ ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಆನ್ ಮಾಡಲು ಹೋಗಿದ್ದಾಗ ಕರಡಿ
ಶಿವಮೊಗ್ಗದಲ್ಲಿ ಚಿನ್ನ ಕಳ್ಳನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಶಿವಮೊಗ್ಗದ ಗಾಂಧಿ ಬಜಾರ್ ನ ಬಂಗಾರದ ಅಂಗಡಿಗೆ ಬಂದು ಬಂಗಾರ ಖರೀದಿಸುವ ನೆಪದಲ್ಲಿ 96 ಗ್ರಾಂ ಚಿನ್ಬಾಭರಣ ಕದ್ದು ಪರಾರಿಯಾಗಿದ್ದ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ 5 ಸಾವಿರ ರೂ. ದಂಡ, ಮೂರು ವರ್ಷ ಶಿಕ್ಷೆ ವಿಧಿಸಿ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಜೈಲು
ಶಿವಮೊಗ್ಗದಲ್ಲಿ ಬಾಲಕಿ ಮೇಲೆ 21 ವರ್ಷದ ಯುವಕ 2022ರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ) ನ್ಯಾಯಾಲಯ ತಪ್ಪಿತಸ್ಥನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ.
ಸಂಸದ ಬಿವೈ ರಾಘವೇಂದ್ರ ಕಾರಿಗೆ ಡಿಕ್ಕಿ ಹೊಡೆದ ಮೊತ್ತೊಂದು ಕಾರು
ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ




