ತುಮಕೂರು
ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಧು (38) ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಮಧುಗಿರಿಯ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇವರು ಕಾಣೆಯಾಗಿದ್ದ ಬಗ್ಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ರಸ್ತೆಯಲ್ಲಿರುವ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಗೆ ಬಿದ್ದು ಮಧು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತುಮಕೂರಿನ ಬಾಲ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,
ಬಿಡದಿಯ ಹೋಟೆಲ್ನಲ್ಲಿ ಯುವಕನ ಕೊಲೆ
ಬಿಡದಿ ಬಳಿಯ ಕದಂಬ ಹೋಟೆಲ್ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ಎರಡೂವರೆ ತಿಂಗಳಿನಿಂದ ನಿಶಾಂತ್ ಕದಂಬ ಹೋಟೆಲ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ
ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು: ಕೆಎನ್ ರಾಜಣ್ಣ
ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂದು ಮಾಜಿ ಸಚಿವ ರಾಜಣ್ಣ ಸ್ವಪಕ್ಷ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ. ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾ.ಪಂನಲ್ಲಿ ತಾಲೂಕು ಆಡಳಿತ ಹಾಗೂ ಗ್ರಾ.ಪಂ ವತಿಯಿಂದ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಈ ಹೇಳಿಕೆ
ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಸಚಿವ ಜಿ ಪರಮೇಶ್ವರ
ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ
ತುಮಕೂರು ವಿವಿಯ ‘ಜ್ಞಾನಸಿರಿʼ ಕ್ಯಾಂಪಸ್ ಲೋಕಾರ್ಪಣೆಗೊಳಿಸಿದ ರಾಜ್ಯಪಾಲ ಗೆಹ್ಲೋಟ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತುಮಕೂರು ಜಿಲ್ಲೆಯ ಬೀದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು’ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು
ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ: ಕೆಎನ್ ರಾಜಣ್ಣ
ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ದೊರೆತಿದ್ದು, ಹಳ್ಳಿಗಾಡಿನ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸ್ಮಾರ್ಟ್ ಕಾರ್ಡ್
ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್
ತುಮಕೂರಿನಲ್ಲಿ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಯಸ್ಕ ಬಾಲಕಿ: ಆರೋಪಿ ಅರೆಸ್ಟ್
ತುಮಕೂರಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸಲು ಕಾರಣನಾದ ಆರೋಪದಡಿ ಮೇಲೆ ವಿನಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 15 ವರ್ಷದ ಬಾಲಕಿಯನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ
ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್ ಲಾಡ್
ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಉದ್ಘಾಟಿಸಿದರು. ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ




