Menu

Accident deaths: ತುಮಕೂರಿನಲ್ಲಿ ಲಾರಿಗೆ ಬೈಕ್‌ ಡಿಕ್ಕಿಯಾಗಿ ಮೂವರ ಸಾವು

ತುಮಕೂರು ಹಿರೇಹಳ್ಳಿ ಸಮೀಪದ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ರಾಜೇಶ್ (25), ದನಂಜಯ್ (27), ಧನುಷ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರೂ ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ಒಂದೇ ಬೈಕ್‌ನಲ್ಲಿ ತುಮಕೂರಿಗೆ ವಾಪಸಾಗುವಾಗ ಅಪಘಾತ

ಹೇಮಾವತಿ ಲಿಂಕ್ ಕೆನಾಲ್ : ರೈತರು, ಸ್ವಾಮೀಜಿಗಳಿಗೆ ಸ್ಪಷ್ಟನೆ ನೀಡಲು ಸಿದ್ಧವೆಂದ ಶಾಸಕ  ರಂಗನಾಥ್

ಕುಣಿಗಲ್ ತಾಲೂಕು ಪಾಲಿನ ಹೇಮಾವತಿ ನೀರನ್ನು ಕೊಂಡೊಯ್ಯಲು ಲಿಂಕ್ ಕೆನಾಲ್ ಯೋಜನೆ ರೂಪಿಸಲಾಗಿದೆ. ಇದರಿಂದ ಬೇರೆ ತಾಲೂಕುಗಳಿಗೆ ಅನ್ಯಾಯ ಆಗುವುದಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ದಾರಿತಪ್ಪಿಸಿ, ಯೋಜನೆಗೆ ವಿರೋಧ ಮಾಡುತ್ತಿದ್ದಾರೆ” ಎಂದು ಕುಣಿಗಲ್ ಶಾಸಕ ಹೆಚ್.ಡಿ. ರಂಗನಾಥ್ 

ಹೇಮಾವತಿ ಲಿಂಕ್ ಕೆನಾಲ್‌; ಸ್ವಾಮೀಜಿಗಳಿಬ್ಬರು ಸೇರಿ ಹಲವರ ವಿರುದ್ಧ ಎಫ್‌ಐಆರ್‌

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ

ಕುಣಿಗಲ್‌ ಪಾಲಿನ ನೀರಿಗಾಗಿ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಅನಿವಾರ್ಯ: ಶಾಸಕ ಡಾ. ರಂಗನಾಥ್

  ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್

ಪ್ರತಿಭಟನೆ ಬೆನ್ನಲ್ಲೇ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿ ತಾತ್ಕಾಲಿಕ ಸ್ಥಗಿತ

ತುಮಕರು: ರೈತರು, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಹೇಮಾವತಿ ಕೆನಲ್ ಲಿಂಕ್ ಸಂಪರ್ಕಿಸಿ ನಡೆಸಲಾಗುತ್ತಿದ್ದ ಕಾಮಗಾರಿ ವಿರೋಧಿ ಸ್ಥಳೀಯರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ

ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಸಿದ್ದರಾಮಯ್ಯ

ಬೆಂಗಳೂರು: ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ

ತುಮಕೂರಿನಲ್ಲಿ ಪತ್ರಕರ್ತನ ಜಾತಿ ನಿಂದನೆ ಆರೋಪ: ವರದಿಗಾರ ಅರೆಸ್ಟ್‌

ತುಮಕೂರಿನಲ್ಲಿ ದಲಿತ  ಪತ್ರಕರ್ತ ಜಿ.ಎನ್.ಮಂಜುನಾಥ್‌ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ಮಾಧ್ಯಮ ವರದಿಗಾರ ಮಂಜುನಾಥ್ ತಾಳಮಕ್ಕಿ ಅವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ರಕರ್ತರನ್ನು ತಾಳಮಕ್ಕಿನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು

ತಿಪಟೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಮಗು ಸಾವು

ತುಮಕೂರಿನ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ಮನೆಯ ಹೊರಗೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ಮಗು ಮೃತಪಟ್ಟಿದೆ. ಮಗುವಿನ ತಲೆ, ಹೊಟ್ಟೆ ಮುಖ, ಕೈ, ಕಾಲು, ತೊಡೆ ಭಾಗವನ್ನು ಕಚ್ಚಿ ಕಿತ್ತು ಹಾಕಿ ನಾಯಿಗಳು ಎಳೆದಾಡಿವೆ. ರಕ್ತದ

ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ

ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ  ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ