Wednesday, October 14, 2026
Menu

ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್‌

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ ಮರೆಸಿಕೊಂಡಿದ್ದರು. ಗೃಹ ಸಚಿವರ ತವರು ಜಿಲ್ಲೆಯ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯ ಜೊತೆ ರಾಮಚಂದ್ರ ಅಸಭ್ಯವಾಗಿ ನಡೆದುಕೊಂಡ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅಮಾನತು ಮಾಡಿ ಡಿಜಿ,

ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್​​ಪಿ ಅಸಭ್ಯ ವರ್ತನೆ

ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್​ ತವರು ಜಿಲ್ಲೆಯ ಡಿವೈಎಸ್​​ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ