Wednesday, October 29, 2025
Menu

ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್‌

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ

ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ

ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ತುಮಕೂರಿನ ಆಟೋ‌ ಚಾಲಕ

ತುಮಕೂರು‌ ನಗರದಲ್ಲಿ  ಆಟೋ‌ ಚಾಲಕರೊಬ್ಬರು ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸುದ್ದಿಯಾಗಿದ್ದಾರೆ. ತುಮಕೂರಿನ ಹನುಮಂತಪುರ  ನಿವಾಸಿ ರವಿಕುಮಾರ್‌ ಅವರ ಆಟೋದಲ್ಲಿ ಪ್ರಯಾಣಿಕರು 4 ಲಕ್ಷ ಬೆಲೆ ಬಾಳುವ ಒಡವೆ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಅರಸೀಕೆರೆ ಮೂಲದ

ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ಶವವಿಟ್ಟು ಕುಟುಂಬದ ಪ್ರತಿಭಟನೆ

ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ 2 ತಿಂಗಳ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು. ಕುದ್ದೂರು ಗ್ರಾಮದ ದೀಪಕ್ ಎಂಬವರ ಪತ್ನಿ ಸಿಂಧು (28) ಹೊಟ್ಟೆ ನೋವಿಗೆ ಚಿಕಿತ್ಸೆ

4.66 ಲಕ್ಷ ರೂ. ಸಾಲಕ್ಕೆ 7.20 ಲಕ್ಷ ಬಡ್ಡಿ ಪಾವತಿಸಿ ಸತ್ತ ವ್ಯಕ್ತಿಯ ಪತ್ನಿಗೆ ಕಿರುಕುಳ

ಮೈಕ್ರೋ ಫೈನಾನ್ಸ್‌ನಿಂದ ಪಡೆದ 4.66 ಲಕ್ಷ ರೂ. ಸಾಲಕ್ಕೆ 7.20 ಲಕ್ಷ ರೂ. ಬಡ್ಡಿ ಕಟ್ಟಿರುವ ವ್ಯಕ್ತಿ ಮೃತಪಟ್ಟಿದ್ದು, ಈಗ ಫೈನಾನ್ಸ್‌ ಸಿಬ್ಬಂದಿಯು ಆತನ  ಪತ್ನಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ತುಮಕೂರಿನಲ್ಲಿ ಕೇಳಿ ಬಂದಿದೆ. ತುಮಕೂರು ನಗರದ ಲೇಬರ್ ಕಾಲೋನಿಯ

ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ

ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು

ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ

ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ

ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ

ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್​​ ಆಸೀಫ್ ​(12), ಮಮ್ತಾಜ್ ​​(38), ಶಾಖಿರ್​​ ಹುಸೇನ್ ​(18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್‌

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ

ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್​​ಪಿ ಅಸಭ್ಯ ವರ್ತನೆ

ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್​ ತವರು ಜಿಲ್ಲೆಯ ಡಿವೈಎಸ್​​ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ