Menu

ತುಮಕೂರು ಮಿಲ್ಕ್ ಯೂನಿಯನ್‌ನಲ್ಲಿ ನೆಲದಲ್ಲಿ ಕುಳಿತು ಕೆಲಸ ಮಾಡುತ್ತಿರುವ ದಲಿತ ಅಧಿಕಾರಿ

ದಲಿತನೆಂಬ ಕಾರಣಕ್ಕೆ ತುಮಕೂರು ಮಿಲ್ಕ್ ಯೂನಿಯನ್ ನಲ್ಲಿ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಚೇರಿಯ ಹಿರಿಯ ಅಧಿಕಾರಿಗಳು ದಲಿತ ಅಧಿಕಾರಿಯ ಕುರ್ಚಿ-ಟೇಬಲ್ ಕಿತ್ತುಕೊಂಡು ನೆಲದ ಮೇಲೆ ಕುಳಿತು ಕೆಲಸ ಮಾಡಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತುಮುಲ್‌ ಲೆಕ್ಕಪತ್ರ ವಿಭಾಗದ ಆಡಳಿತ ಅಧೀಕ್ಷಕ ವಿನಯ್ ಮೂಲತಃ ರಾಮನಗರ ಜಿಲ್ಲೆಯವರು, ಎಂಕಾಂ ಮತ್ತು ಎಂಬಿಎ ಪದವೀಧರರಾಗಿದ್ದಾರೆ. ಎಂಟು ವರ್ಷಗಳಿಂದ ಈ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಸಂಸ್ಥೆಯ ಮೇಲ್ವಿಚಾರಕ ರಾಗಿರುವ ಮೇಲ್ಜಾತಿಯ

ತುಮಕೂರಿನಲ್ಲೂ ಕಾಡಿಯಾ ಗ್ಯಾಂಗ್ ಕಳ್ಳರ ಕಾಟ: ಆರು ಮಂದಿ ಅರೆಸ್ಟ್‌

ಬ್ಯಾಂಕ್‌ಗಳನ್ನೇ ಹಾಟ್ ಸ್ಪಾಟ್ ಆಗಿಸಿಕೊಂಡು ವೃದ್ಧರನ್ನೇ ಟಾರ್ಗೆಟ್ ಮಾಡಿಕೊಂಡು ಹಣ ದೋಚುವ ಮಹಿಳೆಯರ ಗುಂಪು ತುಮಕೂರಿನಲ್ಲೂ ಕಾರ್ಯಾಚರಿಸುತ್ತಿದ್ದು, ಪೊಲೀಸರು ಗ್ಯಾಂಗ್‌ನ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಕಾಡಿಯೂ ಎಂಬ ಊರಿನ ಈ ಮಹಿಳಾ ಕಳವು ಗ್ಯಾಂಗ್‌ ಎಷ್ಟೇ ಜಾಗರೂಕರಾಗಿದ್ದರೂ ಜನರನ್ನು

ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ 

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ

ತುಮಕೂರಿನಲ್ಲಿ ನೀರಿನ ಜಗಳ: ವ್ಯಕ್ತಿ ಮೇಲೆ ವಾಹನ ಚಲಾಯಿಸಿ ಕೊಂದು ಪೊಲೀಸರಿಗೆ ಶರಣಾದ ಆರೋಪಿ

ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ಪೊಲೇನಳ್ಳಿಯಲ್ಲಿ ನೀರಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಗೂಡ್ಸ್ ವಾಹನ ಚಲಾಯಿಸಿ ಆನಂದ ಎನ್ನುವ ವ್ಯಕ್ತಿಯನ್ನು ನಾಗೇಶ ಎಂಬಾತ ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ

ತುಮಕೂರು ದಸರಾ ಮೆರವಣಿಗೆಗೆ 5 ಆನೆ : ಪೂರ್ವಸಿದ್ಧತಾ ಸಭೆಯಲ್ಲಿ ಸಚಿವ ಪರಮೇಶ್ವರ್‌

ಕಳೆದ ವರ್ಷ ತುಮಕೂರು ದಸರಾ ಉತ್ಸವ ಎಲ್ಲ ವರ್ಗ, ಧರ್ಮ, ಜಾತಿಯವರನ್ನೊಳಗೊಂಡು ಆಚರಿಸಿದ್ದರಿಂದ ಯಶಸ್ವಿಯಾಯಿತು, ಈ ಬಾರಿಯ ದಸರಾ ಮೆರವಣಿಗೆಗೆ 5 ಆನೆಗಳನ್ನು ಬಳಸಲಾಗುತ್ತದೆ. ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. “ತುಮಕೂರು ದಸರಾ

ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ

ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ  ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ

ತುಮಕೂರು ಕ್ರಿಕೆಟ್ ಮೈದಾನಕ್ಕೆ 41 ಎಕರೆ ಸ್ವಾಧೀನ ಪತ್ರ ಹಸ್ತಾಂತರ

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ

ಬೆಂಗಳೂರಿನಿಂದ  ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್‌ 12 ರಂದು ಬೆಂಗಳೂರಿನಿಂದ

ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ

ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌  ಮೂಲಕ