ಉಡುಪಿ
ನೌಕಾಪಡೆ ಮಾಹಿತಿ ಪಾಕ್‌ಗೆ ರವಾನೆ: ಉಡುಪಿಯಲ್ಲಿ ಮತ್ತೊಬ್ಬ ಅರೆಸ್ಟ್
ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮತ್ತೊಬ್ಬನನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೌಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತನನ್ನು ಪಶ್ಚಿಮ ಬಂಗಾಳದ
ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ವಂಚಿಸಿದ ಉಡುಪಿ ದಂಪತಿ
ಉಡುಪಿ ಮೂಲದ ದಂಪತಿ ಮುಂಬೈ ಉದ್ಯಮಿಗೆ ನಾಲ್ಕು ಕೋಟಿ ರೂಪಾಯಿಗೂ ಹೆಚ್ಚಿನ ವಂಚನೆ ಆರೋಪ ಕೇಳಿಬಂದಿದೆ. ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದ ಪ್ರಕರಣವನ್ನು ಮಂಗಳೂರು ಪೊಲೀಸ್ ಆಯುಕ್ತರು ಮರು ತನಿಖೆಗೆ ಆದೇಶಿಸಿದ್ದಾರೆ. ಹರಾಜಿಗೆ ಬಂದ ಫ್ಲ್ಯಾಟ್,
ಉಡುಪಿಯ ಯುವಕ ಅಬುಧಾಬಿಯಲ್ಲಿ ಖರೀದಿಸಿದ ಟಿಕೆಟ್‌ಗೆ ಬಂತು 49 ಕೋಟಿ ರೂ.
ಉಡುಪಿಯ ಯುವಕನೊಬ್ಬ ಸ್ನೇಹಿತನೊಂದಿಗೆ ಸೇರಿ ಖರೀದಿಸಿದ ಅಬುಧಾಬಿಯ ಲಕ್ಕಿ ಡ್ರಾನಲ್ಲಿ 49 ಕೋಟಿ ರೂ. ಬಹುಮಾನ ಲಭಿಸಿದೆ. ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಬಹುಮಾನ ವಿಜೇತರಾಗಿದ್ದು, 20 ಮಿಲಿಯನ್ ದಿರಮ್ ಬಹುಮಾನ ಸಿಕ್ಕಿದೆ. ಅಬುಧಾಬಿಯಲ್ಲಿ ಬಿಗ್ ಟಿಕೆಟ್
ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಡಿಕ್ಕಿ: 9 ಮಂದಿಗೆ ಗಾಯ
ಟಿಪ್ಪರ್ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ ನಡೆದಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಕೇರಳ
ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ
ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಪಾಕ್‌ಗೆ ನೌಕಾಪಡೆಯ ರಹಸ್ಯ ಮಾಹಿತಿ: ಮಲ್ಪೆಯಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್
ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣ ಸಂಬಂಧ ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್ನ ಆನಂದ ತಾಲೂಕಿನ ಕೈಲಾಸ್‌ನಗರಿಯ ನಿವಾಸಿ ಹಿರೇಂದ್ರ (34) ಬಂಧಿತ. ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿರುವ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಗುತ್ತಿಗೆ
ಕೊಲ್ಲೂರು ದೇಗುಲ ನಕಲಿ ವೆಬ್‌ಸೈಟ್: ಭಕ್ತರಿಗೆ ವಂಚಿಸುತ್ತಿದ್ದಾತ ರಾಜಸ್ಥಾನದಲ್ಲಿ ಅರೆಸ್ಟ್
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್‌ಸೈಟ್ ಮೂಲಕ ಭಕ್ತರಿಗೆ ವಂಚಿಸುತ್ತಿದ್ದ ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ವೆಬ್‌ಸೈಟ್ ಮೂಲಕ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಂದ ರೂಮ್ ಬುಕ್ಕಿಂಗ್ ಮಾಡಿಸುವುದಾಗಿ ಹೇಳಿ ಹಣ ಪಡೆದು,
ರಜೆ ಸಿಗದೆ ಕೆನಡಾದಲ್ಲಿ ವರ, ಉಡುಪಿಯಲ್ಲಿ ವಧು: ವೀಡಿಯೊ ಕಾಲ್‌ನಲ್ಲೇ ನಿಶ್ಚಿತಾರ್ಥ
ಮಾಗಡಿ ತಾಲೂಕಿನ ಸುಹಾಸ್.ಎಸ್ ಮತ್ತು ಉಡುಪಿಯ ಮೇಘಾ ವೀಡಿಯೊ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವರ ಸುಹಾಸ್ ಕೆನಡಾದಲ್ಲಿದ್ದು, ರಜೆ ಸಿಗದ ಕಾರಣ ಉಡುಪಿ ಸರಸ್ವತಿ ಸಭಾಭವನದಲ್ಲಿ ವಧು ಮೇಘಾ ಮತ್ತು ಕುಟುಂಬದವರು ಹಾಜರಿದ್ದು ನಿಶ್ಚಿತಾರ್ಥ ನೆರವೇರಿತು. ವಧು-ವರರು ವಿಡಿಯೋ ಕಾನ್ಫರೆನ್ಸ್
ಶಬರಿಮಲೆಯಿಂದ ಬಂದು ಭರ್ಜರಿ ಪಾರ್ಟಿ: ಸ್ನೇಹಿತರಿಂದಲೇ ಕೊಲೆ
ಬ್ರಹ್ಮಾವರ ತಾಲೂಕು ಕೋಟ ಪಡುಕರೆಯಲ್ಲಿ ಶಬರಿಮಲೆ ಯಾತ್ರೆ ಮುಗಿಸಿಕೊಂಡು ಬಂದ ಯುವಕ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡು ಭರ್ಜರಿ ಪಾರ್ಟಿ ನಡೆಸಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸ್ನೇಹಿತರಿಂದಲೇ ಕೊಲೆಯಾಗಿದ್ದಾನೆ. ಆಕ್ಸಿಸ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂತೋಷ್ ಪೂಜಾರಿ (30) ಕೊಲೆಯಾದ
ಉಡುಪಿ: 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ
ಕಳೆದ ವರ್ಷ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶದ ವಲಸಿಗರಿಗೆ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಕಳೆದ ವರ್ಷ ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ




