ವಿಜಯನಗರ
ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್ ಸೆಟ್ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ
ಸೊಸೆಗೆ ಲೈಂಗಿಕ ಕಿರುಕುಳ; ತಂದೆಯ ಹತ್ಯೆಗೈದ ಮಗ
ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಲಿಂಗಪ್ಪ (60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ.
ಟೀಕೆ ಮಾಡುತ್ತಿರುವವರಿಂದಲೇ ನಮ್ಮ ಗ್ಯಾರಂಟಿ ಯೋಜನೆಗಳ ನಕಲು: ಡಿಕೆ ಶಿವಕುಮಾರ್
“ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ
ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ
1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ
ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದು
ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ
ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ
ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ
ತುಂಗಾಭದ್ರಾ ಡ್ಯಾಂನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ
ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು
ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ
ನಾಪತ್ತೆಯಾಗಿದ್ದ ಪ್ರೇಮಿಗಳು ಹರಪನಹಳ್ಳಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ ಸಮೀಪ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡಿದ್ದಾರೆ. ಮದ್ದನಸ್ವಾಮಿ ಹಾಗೂ




