ವಿಜಯನಗರ
ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ
1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು
ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದು
ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ
ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ
ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ
ತುಂಗಾಭದ್ರಾ ಡ್ಯಾಂನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ
ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು
ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ
ನಾಪತ್ತೆಯಾಗಿದ್ದ ಪ್ರೇಮಿಗಳು ಹರಪನಹಳ್ಳಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ ಸಮೀಪ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡಿದ್ದಾರೆ. ಮದ್ದನಸ್ವಾಮಿ ಹಾಗೂ
ದಾವಣಗೆರೆ ಬಸ್ ನಲ್ಲಿ ಮಕ್ಕಳ ಎದುರೇ ತಾಯಿಯ ಸಾಮೂಹಿಕ ಅತ್ಯಾಚಾರ
ಜಾತ್ರೆ ಮುಗಿಸಿಕೊಂಡು ಊರಿಗೆ ಮರಳಲು ಹತ್ತಿದ ಬಸ್ ನಲ್ಲಿ ಮಕ್ಕಳ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಆರೋಪಿಗಳಾದ ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ ಕಂಡಕ್ಟರ್ ರಾಜಶೇಖರ್
ಕೊಪ್ಪಳದಲ್ಲಿ ಇಸ್ರೇಲ್ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್
ಕೊಪ್ಪಳದಲ್ಲಿ ಇಸ್ರೇಲ್ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ
ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!
ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್




