Menu
12

ಶ್ರೀನಿವಾಸಪುರದಲ್ಲಿ ರಮೇಶಕುಮಾರ್ ಅವರಿಂದ ಅರಣ್ಯ ಭೂಮಿ ಒತ್ತುವರಿ: ಜಂಟಿ ಸರ್ವೆ

ಎರಡು ದಶಕಗಳಿಂದ ವಿವಾದದ ಕೇಂದ್ರವಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಇಂದು) ಜಂಟಿ ಸರ್ವೆ ನಡೆಯಲಿದೆ.

ಕಳೆದ ಎರಡು ತಿಂಗಳಲ್ಲಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಲಾಗಿತ್ತು. ಇಂದು ಜಂಟಿ ಸರ್ವೆ ಕಾರ್ಯಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೋಲಾರ ಜಿಲ್ಲಾಡಳಿತ ಮಾಡಿಕೊಂಡಿದೆ.

ಕಳೆದೆರಡು ದಶಕಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಕೇಳಿ ಬರುತ್ತಿರುವ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಜಂಟಿ ಸರ್ವೆ ಕಾರ್ಯ ನಿಗದಿಯಾಗಿದೆ.

ಶ್ರೀನಿವಾಸಪುರ ತಾಲೂಕು ಜಿನಕಲಕುಂಟೆ ಅರಣ್ಯ ಪ್ರದೇಶದಲ್ಲಿನ ಹೊಸಹುಡ್ಯ ಗ್ರಾಮದ ಸರ್ವೆ ನಂ1 ಮತ್ತು 2ರಲ್ಲಿ 61.39 ಗುಂಟೆ ಅರಣ್ಯ ಭೂಮಿಯನ್ನು ರಮೇಶ್ ಕುಮಾರ್ ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ಪರ-ವಿರೋಧ ಹೋರಾಟಗಳು ನಡೆಯುತ್ತಲೇ ಇದೆ. ಹೈಕೋರ್ಟ್ ಸರ್ವೆ ಮಾಡಿ ಮುಗಿಸಿ ಜನವರಿ 30ರ ಒಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

Related Posts

Leave a Reply

Your email address will not be published. Required fields are marked *