ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋಸ್ ಬಟ್ಲರ್ ತ್ಯಜಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದೇನೆ ಎಂದು ಜೋಸ್ ಬಟ್ಲರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆಫ್ಘಾನಿಸ್ತಾನ ವಿರುದ್ಧ ಸೋಲುಂಡ ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಿ ಗುಂಪಿಯನ್ನು ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಸೆಮಿಫೈನಲ್ ರೇಸ್ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಔಪಚಾರಿಕತೆಗಾಗಿ ಆಡಬೇಕಿದೆ.
ಜೋಸ್ ಬಟ್ಲರ್ ನಾಯಕತ್ವದಲ್ಲಿ ಇಂಗ್ಲೆಂಡ್ 21 ಪಂದ್ಯಗಳ ಪೈಕಿ 15ರಲ್ಲಿ ಸೋಲುಂಡಿದೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಡಿದ 9 ಪಂದ್ಯಗಳ ಪೈಕಿ ಕೇವಲ 3 ಪಂದ್ಯಗಳಷ್ಟೇ ಗೆದ್ದಿತ್ತು. ಟಿ-20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದರೆ ನಂತರ ನಡೆದ ಭಾರತ ವಿರುದ್ಧದ ಸರಣಿಯಲ್ಲಿ 0-3ರಿಂದ ಕ್ಲೀನ್ ಸ್ವೀಪ್ ನಿಂದ ಮುಖಭಂಗ ಅನುಭವಿಸಿತ್ತು.