ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಉದಯಕಾಲ)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *