Menu

ಕನ್ನಡ ನಟ ದಿಲೀಪ್‌ರಾಜ್‌ ನಿಧನ

ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೂ ಫಲಕಾರಿಯಾಗಿಲ್ಲ.

ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಕ್ರಿಯಾಶೀಲರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.

ದಿಲೀಪ್ ರಾಜ್ ತಂದೆ ಹೆಚ್.ಎಂ. ಶಿವರುದ್ರಪ್ಪ ಅರಸೀಕೆರೆಯವರು. ನಮ್ಮ ಅಣ್ಣ ಹಾಗೂ ಅವರು ಒಟ್ಟಿಗೆ ಓದಿದವರು. ದಿಲೀಪ್ ರಾಜ್ ನಿಧನದ ಸುದ್ದಿ ತಿಳಿದು ಬಹಳ ಆಘಾತವಾಗಿದೆ. ಹೊಟ್ಟೆ ಉರಿಯುತ್ತಿದೆ, ಅವರು ನಮ್ಮ ಮಕ್ಕಳ ರೀತಿ ಎಂದು ನಟ ದೊಡ್ಡಣ್ಣ ದಿಲೀಪ್ ರಾಜ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Related Posts

Leave a Reply

Your email address will not be published. Required fields are marked *