Menu

ಕನ್ನಡದ ಯುವ ನಟ ಸಂತೋಷ್ ಬಾಲರಾಜ್ ನಿಧನ

santhosh balraj

ಬೆಂಗಳೂರು: ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ 9.30ಕ್ಕೆ 34 ವರ್ಷದ ಸಂತೋಷ್ ಬಾಲರಾಜ್ ನಿಧರಾಗಿದ್ದಾರೆ.

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕ ನಟರಾಗಿ ನಟಿಸಿದ್ದರು.

Related Posts

Leave a Reply

Your email address will not be published. Required fields are marked *