ಹಿರಿಯ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

ಬೆಂಗಳೂರು, ಅ 12 ಭಾರತೀಯ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಗ್ಯಾಸ್ಟ್ರಿಕ್ ಹಾಗೂ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಅವರ ಅಂತ್ಯಕ್ರಿಯೆ ಹೆಬ್ಬಾಳದ ಸ್ಮಶಾನದಲ್ಲಿ ನೆರವೇರಲಿದೆ ಎಂದು ಪುತ್ರ ಅನಂತು ಅವರು ಯುಎನ್‍ಐ ಗೆ ಮಾಹಿತಿ ನೀಡಿದ್ದಾರೆ. ಅವರು ಪುತ್ರ ಅನಂತು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮೂಲತಃ ಮೈಸೂರಿನವರಾದ ರಾಜನ್ ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ಸೇರಿಕೊಂಡು ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಸಂಗೀತ ನಿರ್ದೇಶನ ಮಾಡುತ್ತಿದ್ದರು. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಇದರಲ್ಲಿ ಕನ್ನಡದ 200ಕ್ಕೂ ಅಧಿಕ ಸಿನಿಮಾಗಳಿವೆ. ಕನ್ನಡದ ಜೊತೆ ತೆಲುಗಿನಲ್ಲಿಯೂ ಈ ಜೋಡಿ ದೊಡ್ಡ ಯಶಸ್ಸು ಕಂಡಿತ್ತು. ತಮಿಳು, ಹಿಂದಿ, ಮಲಯಾಳಂ, ಶ್ರೀಲಂಕಾದ ಸಿಂಹಳ ಭಾಷೆಯ ಸಿನಿಮಾಗಳಿಗೂ ಸಂಗೀತ ಸಂಯೋಜಿಸಿದ್ದಾರೆ. ರಾಜನ್‌ ಅವರ ಸಹೋದರ ನಾಗೇಂದ್ರ ಅವರು 2000ರಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು.

Leave a Reply

Your email address will not be published. Required fields are marked *