ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿಧನರಾದರು. ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ.
ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಇಲ್ಲೇ ಬೆಂಗಳೂರಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಗುರುತು ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರು ನೊಂದಿದ್ದರು, ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಪಾರು ಮತ್ತು ವಧು ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನರ ಪ್ರೀತಿ ಗಳಿಸಿವೆ. ‘ಮ್ಯಾಕ್ಸ್’ ಚಿತ್ರದಲ್ಲೂ ನಟಿಸಿದ್ದರು.